dharwad : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ 5 ಕೋಟಿ ರೂ. ಮೌಲ್ಯದ 7.700 ಕೆ.ಜಿ ತೂಕದ ಚಿನ್ನಾಭರಣಗಳನ್ನು (Gold Jewellery) ಧಾರವಾಡ (Dharwad) ಹೊರವಲಯದ ತೇಗೂರು ಚೆಕ್ ಪೋಸ್ಟ್ ಬಳಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಇತ್ಯಾದಿ ಚಟುವಟಿಕೆಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿರಿಸಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಧಾರವಾಡ-ಬೆಳಗಾವಿ ರಸ್ತೆಯ ತೇಗೂರು ಚೆಕ್ ಪೋಸ್ಟ್ನಲ್ಲಿ ಇದೀಗ ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ ಕಡೆಯಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ವಾಹನದಲ್ಲಿ ಈ ಚಿನ್ನಾಭಾರಣ ಪತ್ತೆಯಾಗಿದೆ. ಮಲಬಾರ್, ಜೋಯಾಲುಕಾಸ್, ಕಲ್ಯಾಣ್ ಜ್ಯುವೆಲರ್ಸ್ ಸೇರಿದಂತೆ ಇನ್ನಿತರ ಕಂಪನಿಗಳ ಚಿನ್ನಾಭರಣಗಳನ್ನು ಗರಗ ಠಾಣೆ ಪೊಲೀಸರು ವಶಪಡಿಸಿಕೊಂಡು ಆದಾಯ ಮತ್ತು ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ.