Kornersite

Crime Just In National

Crime News: ಬಿಹಾರದಲ್ಲಿ ಕಳ್ಳಭಟ್ಟಿ ಪ್ರಕರಣ; ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆ!

ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ವಿಷಪೂರಿತ ಕಳ್ಳಭಟ್ಟಿ ಸೇವನೆಯಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ ಎನ್ನಲಾಗಿದೆ. ಸರ್ಕಾರದ ಅಧಿಕೃತ ಅಂಕಿ- ಅಂಶಗಳ ಪ್ರಕಾರ ಈಗಾಗಲೇ 27 ಜನರು ಸಾವನ್ನಪ್ಪಿದ್ದಾರೆ. ಅಸ್ವಸ್ಥಗೊಂಡ ಹಲವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.


ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಐವರು ರೋಗಿಗಳು ಸಾವನ್ನಪ್ಪಿದ್ದಾರೆ. ಹಲವು ರೋಗಿಗಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಪರಹಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್ ಪುರದ ವೀರೇಂದ್ರ ಸಾಹ್, ಹರ್ಸಿದ್ಧಿ ಪೊಲೀಸ್ ಠಾಣೆ ವ್ಯಾಪ್ತಿಯ ಮಾನೇಜ್ ಮಹತೋ ಹಾಗೂ ಬ್ರಿಜೇಶ್ ಯಾದವ್ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ.


ಸದ್ಯ 11 ಜನ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯ ಐದು ಪೊಲೀಸ್ ಠಾಣೆ ವ್ಯಾಪ್ತಿಯಿಂದ ಆಂಬುಲೆನ್ಸ್ ಮೂಲಕ ಮದ್ಯ ಸೇವನೆಯಿಂದ ಅಸ್ವಸ್ಥರಾಗಿರುವ ರೋಗಿಗಳನ್ನು ಕರೆತರುವ ಪ್ರಕ್ರಿಯೆ ನಡೆಯುತ್ತಿದೆ. ಪೊಲೀಸರು ಒಂಭತ್ತು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣದ ತನಿಖೆಯ ಭಾಗವಾಗಿ ಪೊಲೀಸರು ಇದುವರೆಗೆ ಐದು ಪ್ರಕರಣಗಳನ್ನು ದಾಖಲಿಸಿ 174 ಜನರನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಹೇಳಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ