Kornersite

Crime Just In Karnataka State

Crime Story: ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಕ್ಕಳು ಸಾವು!

ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ತುಮಕೂರಿನ ಬೆಳಗುಂಬಾದ ಸಿದ್ದರಾಮೇಶ್ವರ ಬಡಾವಣೆಯಲ್ಲಿ ನಡೆದಿದೆ.

ಪ್ರಜ್ವಲ್ (14) ಹಾಗೂ ಯತೀಶ್ (14) ಸಾವನ್ನಪ್ಪಿದ ಮಕ್ಕಳು ಎಂದು ಗುರುತಿಸಲಾಗಿದೆ. ಈ ಇಬ್ಬರೂ ಮಕ್ಕಳು 8ನೇ ತರಗತಿಯಲ್ಲಿ ಓದುತ್ತಿದ್ದರು. ಮೃತ ಯತೀಶ್, ವೀರಭದ್ರಯ್ಯ ಎಂಬುವವರ ಮಗನಾಗಿದ್ದು, ಪ್ರಜ್ವಲ್‌ ಪಕ್ಕದ ಮನೆಯ ಸಿದ್ದಲಿಂಗಯ್ಯ ಎಂಬುವರ ಮಗನಾಗಿದ್ದಾನೆ. ಇಬ್ಬರು ಅಕ್ಕಪಕ್ಕದ ಮನೆ ನಿವಾಸಿಗಳು. ಶಾಲೆಗೆ ರಜೆ ಇರುವ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಆಟವಾಡುತ್ತಿದ್ದರು. ಆದರೆ, ಮನೆಯೊಳಗೆ ಬಿಟ್ಟು ಹೊರಗೆ ಹೋಗಿ ಆಟವಾಡಿಕೊಳ್ಳುವಂತೆ ಮನೆಯವರು ಕಳುಹಿಸಿದ್ದಾರೆ. ಹೀಗಾಗಿ, ಮನೆಯ ಮೇಲೆ ಹೋಗಿ ಆಡುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಬೆಸ್ಕಾಂ ಸಿಬ್ಬಂದಿಗೆ ಮನೆ ಮುಂದೆ ಹಾದು ಹೋಗಿದ್ದ ವಿದ್ಯುತ್‌ ತಂತಿಗಳಿಗೆ ಪ್ಲಾಸ್ಟಿಕ್‌ ಪೈಪ್‌ಗಳನ್ನು ಅಳವಡಿಸಿ ವಿದ್ಯುತ್‌ ಶಾಕ್‌ ಉಂಟಾಗದಂತೆ ಕ್ರಮವಹಿಸಲು ಮನೆಯವರು ಮನವಿ ಮಾಡಿದ್ದರು. ಆದರೆ, ಮನೆಯವರು ಹೇಳಿದರೂ, ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯ ಮಾಡಿದ್ದರು. ಈಗ ಮನೆಯ ಮಕ್ಕಳು ವಿದ್ಯುತ್‌ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದು, ಬೆಸ್ಕಾಂ ಸಿಬ್ಬಂದಿ ವಿರುದ್ಧ ಮನೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ