Bangalore : ನಿನ್ನೆ ಇಳಿಕೆ ಕಂಡಿದ್ದ ಚಿನ್ನದ ದರ ಏ. 20ರಂದು ತುಸು ಏರಿಕೆ ಕಂಡಿದೆ. ಬೆಳ್ಳಿಯ ದರದಲ್ಲಿ ಕೂಡ ಏರಿಕೆಯಾಗಿದೆ.
ಸೋಮವಾರ ಮತ್ತು ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸ್ಥಿರತೆ ಸಾಧಿಸಿದ್ದವು. ಬೆಂಗಳೂರು ಸೇರಿದಂತೆ ಭಾರತದ ವಿವಿಧೆಡೆ ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಏರಿಕೆಯಾಗಿದೆ. ದೇಶದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 56,050 ರೂ. ಆಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,150 ರೂ. ಆಗಿದೆ. 100 ಗ್ರಾಂ ಬೆಳ್ಳಿಯ ಬೆಲೆ 7,760 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂ.ಗೆ 55,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಂಗೆ 8,050 ರುಪಾಯಿಯಲ್ಲಿ ಇದೆ.
ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದಾಗಿ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 20ಕ್ಕೆ):
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,050 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,150 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 776 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,100 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,200 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 810 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಂ):
• ಮಲೇಷ್ಯಾ: 2,840 ರಿಂಗಿಟ್ (52,543 ರುಪಾಯಿ)
• ದುಬೈ: 2217.50 ಡಿರಾಮ್ (49,651 ರುಪಾಯಿ)
• ಅಮೆರಿಕ: 615 ಡಾಲರ್ (50,569 ರುಪಾಯಿ)
• ಸಿಂಗಾಪುರ: 831 ಸಿಂಗಾಪುರ್ ಡಾಲರ್ (51,108 ರುಪಾಯಿ)
• ಕತಾರ್: 2,280 ಕತಾರಿ ರಿಯಾಲ್ (51,500 ರೂ)
• ಓಮನ್: 244.50 ಒಮಾನಿ ರಿಯಾಲ್ (52,222 ರುಪಾಯಿ)
• ಕುವೇತ್: 190 ಕುವೇತಿ ದಿನಾರ್ (50,953 ರುಪಾಯಿ)