Kornersite

Bengaluru Just In Karnataka Politics State

Karnataka Assembly Election: ಮಾಜಿ ಸಿಎಂಗಿಂತ ಅವರ ಪತ್ನಿಯೇ ಶ್ರೀಮಂತೆ!

Mysore : ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ವರುಣಾ (Varuna) ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಅವರ ಆಸ್ತಿ ಘೋಷಣೆ ಮಾಡಿದ್ದು, ಪತ್ನಿ ಪಾರ್ವತಿ ಅವರೇ ಹೆಚ್ಚು ಶ್ರೀಮಂತೆಯಾಗಿದ್ದಾರೆ. ಸಿದ್ದರಾಮಯ್ಯ ಅವರ ಬಳಿ 19 ಕೋಟಿ ರೂ. ಆಸ್ತಿ ಇದ್ದರೆ, ಅವರ ಪತ್ನಿಯ ಬಳಿ 32.12 ಕೋಟಿ ರೂ. ಆಸ್ತಿ ಇದೆ.

ಸಿದ್ದರಾಮಯ್ಯ ಅವರು 9,58 ಕೋಟಿ ಚರಾಸ್ತಿ, 9.43 ಕೋಟಿ ಸ್ಥಿರಾಸ್ತಿ ಹೊಂದಿದ್ದಾರೆ. ಅವರ ಪತ್ನಿ 11.26 ಕೋಟಿ ರೂ. ಚರಾಸ್ತಿ, 19.56 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದು, 1.29 ಕೋಟಿ ರೂ. ಪಿತ್ರಾರ್ಜಿತವಾಗಿ ಬಂದಿದೆ. 16.24 ಕೋಟಿ ರೂ. ಸಾಲ ಇದೆ.

ಸಿದ್ದರಾಮಯ್ಯ ಕೂಡ 6.84 ಕೋಟಿ ರೂ. ಸಾಲ ಘೋಷಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರು 2018ರ ಚುನಾವಣೆ ಕಾಲಕ್ಕೆ 18.55 ಕೋಟಿ ರೂ. ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು. ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಿಂದಿ ಅಭ್ಯರ್ಥಿಯಾಗಿ ಸಿದ್ದರಾಮಯ್ಯ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ರ‍್ಯಾಲಿಯಲ್ಲಿ ತೆರಳಿ ಉಮೇದುವಾರಿಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು. ಮಾಜಿ ಸಚಿವ ಹೆಚ್‌.ಸಿ.ಮಹದೇವಪ್ಪ ಸೇರಿದಂತೆ ಹಲವು ನಾಯಕರು ಇದ್ದರು.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು