Bangalore : ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಹೀಗಾಗಿ ಬಹುತೇಕ ಪಕ್ಷಗಳು ತಮ್ಮ ಅಭ್ಯರ್ಥಿಗಳ ಹೆಸರನ್ನು ಘೋಷಿಸಿವೆ.

ಅದರಲ್ಲಿಯೂ ಏಪ್ರಿಲ್ 20ರಂದು ವರ್ಷದ ಮೊದಲ ಅಮವಾಸ್ಯೆ ಹಿನ್ನೆಲೆಯಲ್ಲಿ ಆಚಾರ-ವಿಚಾರ ಪಾಲಿಸುವ ಬಹುತೇಕ ಅಭ್ಯರ್ಥಿಗಳು ಏಪ್ರಿಲ್ 19ರ ಬುಧವಾರದಂದೇ ನಾಮಪತ್ರ ಸಲ್ಲಿಸಿದ್ದಾರೆ. ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಕೊನೆಯ ಪಟ್ಟಿ ಬಿಡುಗಡೆ ಮಾಡಿದೆ. ಇಂದು ಕೂಡ ಅನೇಕ ಪ್ರಮುಕ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ. ಏಪ್ರಿಲ್ 21ರಿಂದ ನಾಮಪತ್ರಗಳ ಪರಿಶೀಲನೆ ನಡೆಯುತ್ತದೆ. ಏಪ್ರಿಲ್ 24ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ಇಂದು ಸಾಕಷ್ಟು ಸಂಖ್ಯೆಯಲ್ಲಿ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ.