Kornersite

Crime Just In National

Crime News: ಮಾಲೀಕನ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ

ಪುಣೆಯ ವಡ್ಗಾಂವ್ ಹತ್ತಿರ ಭೀಕರ ಘಟನೆಯೊಂದು ವರದಿಯಾಗಿದ್ದು, ತಮ್ಮ ಮಾಲೀಕನ ಮಗಳ ಮೇಲೆಯೇ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.

ಕಾಮುಕ ಆರೋಪಿಯನ್ನು ವಡ್ಗಾಂವ್ ಶೇರಿ ನಿವಾಸಿ ಸೊಹೈಲ್ ಅಲಿಯಾಸ್ ಸೂರಜ್ ರಂಜಾನ್ ಶೇಖ್ (23) ಎಂದು ಗುರುತಿಸಲಾಗಿದೆ. ಆರೋಪಿಯು ಅಂಗಡಿಯೊಂದರಲ್ಲಿ ನೌಕರನಾಗಿ ಕೆಲಸ ಮಾಡುತ್ತಿದ್ದ. ಈ ಅಂಗಡಿ ಮಾಲೀಕನ ಅಪ್ರಾಪ್ತ ವಯಸ್ಸಿನ ಮಗಳಿಗೆ ಪ್ರೀತಿಸುವುದಾಗಿ ಹೇಳಿ ಆಮಿಷವೊಡ್ಡಿ ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ಘಟನೆ ಕುರಿತು ಮಹಿಳೆಯೊಬ್ಬರು ಚಂದನ್ ನಗರ ಪೊಲೀಸ್ ಠಾಣೆಯಲ್ಲಿ (161/23) ದೂರು ದಾಖಲಿಸಿದ್ದು, ಚಂದನ್ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು ದೂರುದಾರರ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಈತ ಅಪ್ರಾಪ್ತ ಬಾಲಕಿಗೆ ತುಂಬಾ ಇಷ್ಟ ಪಡುತ್ತಿದ್ದು, ಆಕೆಯನ್ನು ಪ್ರೀತಿಸುತ್ತಿರುವುದಾಗಿ ತಿಳಿಸಿದ್ದಾನೆ.

ಎರಡು ತಿಂಗಳ ಹಿಂದೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಗೆ ತೆರಳಿದ ಆರೋಪಿ, ಆಕೆಯನ್ನು ಬಲವಂತವಾಗಿ ಮಲಗುವ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭಿಣಿಯಾದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಆರೋಪಿ ಸೊಹೈಲ್ ಅಲಿಯಾಸ್ ಸೂರಜ್ ರಂಜಾನ್ ಶೇಖ್‌ನನ್ನು ಪೊಲೀಸರು ಬಂಧಿಸಿದ್ದು, ಪಿಎಸ್‌ಐ ಕಾಳೆ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ