ಗೋಕಾಕ್ (Gokak) ಕ್ಷೇತ್ರದ ಅಭ್ಯರ್ಥಿ ರಮೇಶ್ ಜಾರಕಿಹೊಳಿ (Ramesh Jarkiholi) ಅವರು ಗೋಕಾಕ್ ಕ್ಷೇತ್ರದಿಂದ ಸ್ಪರ್ಧಿಸಿದ್ದು, ತಮ್ಮ ಆಸ್ತಿ ಘೋಷಿಸಿಕೊಂಡಿದ್ದಾರೆ.
ಈ ಬಾರಿ ಅವರ ಆಸ್ತಿ 49.25 ಕೋಟಿ ರೂ. ಇದೆ ಎಂದು ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ. ರಮೇಶ್, 2018ರ ವಿಧಾನಸಭೆ ಚುನಾವಣೆಯಲ್ಲಿ 122 ಕೋಟಿ ಆಸ್ತಿ ಘೋಷಿಸಿಕೊಂಡಿದ್ದರು. 2013 ರ ಚುನಾವಣೆಯಲ್ಲಿ 57 ಕೋಟಿ ಆಸ್ತಿ ಇರುವುದಾಗಿ ಘೋಷಿಸಿದ್ದರು. ಆದರೆ 2023ರ ಚುನಾವಣೆಯಲ್ಲಿ ಘೋಷಿಸಿದ ಆಸ್ತಿಯಲ್ಲಿ ಗಣನೀಯ ಕುಸಿತ ಕಂಡಿದೆ. ಪುತ್ರ ಸಂತೋಷ ಜಾರಕಿಹೊಳಿ ಪ್ರತ್ಯೇಕವಾಗಿ ವಾಸಿಸುತ್ತಿರುವ ಕಾರಣಕ್ಕೆ ಆಸ್ತಿ ಕುಸಿತವಾಗಿದೆ ಎನ್ನಲಾಗಿದೆ.
ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಎಸ್ಐಟಿ ಕೂಡ ಬಿ ರಿಪೋರ್ಟ್ ಸಲ್ಲಿಸಿದೆ ಎಂದು ರಮೇಶ್ ಜಾರಕಿಹೊಳಿ ಉಲ್ಲೇಖಿಸಿದ್ದಾರೆ.