Bangalore : ಮಾರ್ಚ್ 9 ರಿಂದ 29ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ(Karnataka 2nd PUC Result 2023) ಫಲಿತಾಂಶ ಪ್ರಕಟವಾಗಿದ್ದು,
ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. 7,02,067 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಈ ಬಾರಿ 74.67% ಫಲಿತಾಂಶ ದಾಖಲಾಗಿದೆ. ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ ಎರಡನೇ ಸ್ಥಾನ( 95.24%) ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ ಯಾದಗಿರಿಗೆ (78.97%) ಕೊನೆಯ ಸ್ಥಾನ ಸಿಕ್ಕಿದೆ. ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದು 80.25% ತೇರ್ಗಡೆ ಹೊಂದಿದ್ದರೆ, ಬಾಲಕರು 69.05% ಪಾಸ್ ಆಗಿದ್ದಾರೆ. ಗ್ರಾಮೀಣ ಭಾಗದ 74.79% ಮಕ್ಕಳು ತೇರ್ಗಡೆಯಾಗಿದ್ದರೆ 74.63% ನಗರ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕಲಾ ವಿಭಾಗದಲ್ಲಿ1,34,876 ಶ್ರ( ಶೇಕಡಾ 61.22ರಷ್ಟು) ವಿದ್ಯಾರ್ಥಿ ಪಾಸ್ ಆಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 1,82,246 (ಶೇಕಡಾ 75.89ರಷ್ಟು) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 2,07,087 (ಶೇಕಡಾ 85.71ರಷ್ಟು) ಪಾಸ್ ಆಗಿದ್ದಾರೆ. ವಿದ್ಯಾರ್ಥಿಗಳು karresults.nic.in/ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದ್ದು, ಆನ್ಲೈನ್ ಮೂಲಕ ಚೆಕ್ ಮಾಡುವುದು ಹೇಗೆ ಎನ್ನುವುದು ಈ ಕೆಳಗಿನಂತಿದೆ ನೋಡಿ.
ಒಟ್ಟು 7.26 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆಗೆ ನೋಂದಣಿ ಮಾಡಿಕೊಮಡಿದ್ದರು. ಅದರಲ್ಲಿ ಶೇ.6 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, ಉಳಿದಂತೆ ಎಲ್ಲ ವಿದ್ಯಾರ್ಥಿಗಳು ಕೂಡ ಪರೀಕ್ಷೆಯನ್ನು ಬರೆದಿದ್ದರು.