Kornersite

Bengaluru Just In Karnataka State

Corona Udate: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಸೋಂಕಿತರ ಸಂಖ್ಯೆ!

Bangalore : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸಾಂಕ್ರಾಮಿಕ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 537 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಬೆಂಗಳೂರುನಲ್ಲಿಯೇ (Bengaluru) 367 ಹೊಸ ಪ್ರಕರಣಗಳು ದಾಖಲಾಗಿದ್ದು, ನಗರವಾಸಿಗಳಲ್ಲಿ ಆತಂಕ ಮತ್ತೆ ಮನೆ ಮಾಡುತ್ತಿದೆ. ರಾಜ್ಯದಲ್ಲಿ 2070 ಸಕ್ರಿಯ ಪ್ರಕರಣಗಳಿದ್ದು, ವಾರದ ಏರಿಕೆ ಪ್ರಮಾಣ 3.52ರಷ್ಟಿದೆ. ದೈನಂದಿನ ಏರಿಕೆಯು ಶೇ 3.06 ರಷ್ಟಿದೆ. ಕೊರೊನಾದಿಂದಾಗಿ ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12 ಸಾವಿರ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕೊರೊನಾದಿಂದ ಕಳೆದ 24 ಗಂಟೆಗಳಲ್ಲಿ 42 ಜನ ಸಾವನ್ನಪ್ಪಿದ್ದಾರೆ ಎದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 8 ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಉತ್ತರ ಪ್ರದೇಶ, ತಮಿಳುನಾಡು, ರಾಜಸ್ಥಾನ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಹರಿಯಾಣ ಮತ್ತು ದೆಹಲಿ ಈ ಎಂಟು ರಾಜ್ಯಗಳಿಗೆ ಭೂಷಣ್ ಪತ್ರ ಬರೆದಿದ್ದಾರೆ. ಕೊರೊನಾ ಲಕ್ಷಣಗಳ ಬಗ್ಗೆ ಅಲಕ್ಷ್ಯ ವಹಿಸಬೇಡಿ. ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳ ಮೇಲೆ ಹೆಚ್ಚು ನಿಗಾ ವಹಿಸಿ. ಕೊರೊನಾ ಹರಡದಂತೆ ಜಾಗರುಕತೆಯಿಂದಿರಿ. ಅಲ್ಲದೇ ಉಸಿರಾಟದ ತೊಂದರೆ, ಜ್ವರ ಮಾದರಿಯ ಐಎಲ್‌ಐ ಪ್ರಕರಣಗಳ ಬಗ್ಗೆ ನಿಗಾ ಇರಲಿ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ