Belagavi : ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಸವದತ್ತಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ (Ratna Mamani) ಅವರು ತೊಂದರೆ ಮಾಡಿಕೊಂಡಿದ್ದು, ಈಗ ತಿರಸ್ಕೃತವಾಗುವ ಭೀತಿಯಲ್ಲಿದ್ದಾರೆ.
ಚೆಂಡು ಈಗ ಸವದತ್ತಿ ಆರ್ಓ ಅಂಗಳದಲ್ಲಿದೆ. ಬೆಳಗಾವಿ (Belagavi) ಜಿಲ್ಲೆಯಲ್ಲಿ ಪ್ರತಿಷ್ಠಿತ ಕ್ಷೇತ್ರವಾಗಿರುವ ಸವದತ್ತಿ ಯಲ್ಲಮ್ಮ ಮತಕ್ಷೇತ್ರಕ್ಕೆ ಆಯ್ಕೆ ಬಯಸಿ ಬಿಜೆಪಿಯ ರತ್ನಾಮಾಮನಿ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಸಲ್ಲಿಸಿದ ನಾಮಪತ್ರದಲ್ಲಿ ಲೋಪದೋಷಗಳಿವೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ (Congress) ಅಭ್ಯರ್ಥಿ ವಿಶ್ವಾಸ ವೈದ್ಯ ಹಾಗೂ ಆಪ್ ಪಕ್ಷದ (AAP) ಅಭ್ಯರ್ಥಿ ಬಾಪುಗೌಡ ಚುನಾವಣಾ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದ್ದಾರೆ.
ಫಾರಂ ನಂಬರ್ 29ರ ನಮೂನೆ 2019ರಲ್ಲಿ ಬದಲಾವಣೆ ಮಾಡಲಾಗಿದೆ. ಆದರೆ 2018ರ ನಮೂನೆ ತುಂಬಿ ನಾಮಪತ್ರ ಸಲ್ಲಿಕೆ ಆರೋಪ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಶನಿವಾರ ವಿಚಾರಣೆಗೆ ಸಮಯ ನಿಗದಿ ಮಾಡಲಾಗಿದೆ ಎಂದು ಹೇಳಲಾಗಿದೆ.
ಪ್ರಮಾಣ ಪತ್ರ ನಿಯಮಬದ್ಧವಾಗಿಲ್ಲ. ಇದರಲ್ಲಿ ಲೋಪದೋಷಗಳಿವೆ ಎಂದು ಕಾಂಗ್ರೆಸ್ ಹಾಗೂ ಆಪ್ ಪಕ್ಷಗಳು ಆಕ್ಷೇಪಣೆ ವ್ಯಕ್ತಪಡಿಸಿವೆ. ಹೀಗಾಗಿ ಚುನಾವಣಾ ಅಧಿಕಾರಿ ಸಮಯ ನಿಗದಿ ಮಾಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.