Kornersite

Bengaluru Just In Karnataka Politics State

Karnataka Assembly Election: ಮಾಜಿ ಸಿಎಂ ಕುಮಾರಸ್ವಾಮಿಗೆ ಅನಾರೋಗ್ಯ!?

Bangalore : ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ತಿಳಿದು ಬಂದಿದೆ.

ನಿರಂತರ ಪ್ರಚಾರದಿಂದ ಬಳಲಿರುವ ಅವರು ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಅನಾರೋಗ್ಯದ ಹಿನ್ನೆಲೆ ಜೆ.ಪಿ.ನಗರದ ನಿವಾಸದಲ್ಲಿಯೇ ಕುಮಾರಸ್ವಾಮಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ‌ ಕುಮಾರಸ್ವಾಮಿ ಅವರ ಎಲ್ಲ ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಯಾರನ್ನೂ ಕೂಡ ಭೇಟಿ ಮಾಡಲು ಕುಮಾರಸ್ವಾಮಿ ನಿರಾಕರಿಸಿದ್ದು, ಮನೆಯಲ್ಲಿಯೇ ಇದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.


ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಪರವಾಗಿ ಇಂದು ಹೆಚ್‌ ಡಿಕ ಕುಮಾರಸ್ವಾಮಿ ಪ್ರಚಾರ ಮಾಡಬೇಕಿತ್ತು. ರಾಮನಗರ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ‌ ಪ್ರಚಾರ ನಡೆಸಬೇಕಿತ್ತು. ಪುತ್ರನ ಗೆಲುವಿಗಾಗಿ ತಾಲೂಕಿನ ಹಾಗಲಹಳ್ಳಿ, ಗುಡ್ಡದಹಳ್ಳಿ, ಸುಗ್ಗನಹಳ್ಳಿ, ಬಿಳಗುಂಬ, ಮಾಯಗಾನಹಳ್ಳಿ‌ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕ್ಯಾಂಪೇನ್ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಅನಾರೋಗ್ಯದ ಕಾರಣ ಕುಮಾರಸ್ವಾಮಿ ಭಾಗವಹಿಸುತ್ತಿಲ್ಲ ಎನ್ನಲಾಗಿದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು