Ramanagar : ಪ್ರಧಾನಿ ನರೇಂದ್ರ ಮೋದಿ ಅವರು ಹಳೇ ಮೈಸೂರು (Old Mysuru) ಭಾಗದಲ್ಲಿ ಬಿಜೆಪಿ (BJP) ಪರ ಪ್ರಚಾರ ಮಾಡಲು ಮುಂದಾಗಿದ್ದು, ಏ.30ರಂದು ಚನ್ನಪಟ್ಟಣಕ್ಕೆ(Channapatna) ಪ್ರಧಾನಿ ಮೋದಿ (PM Narendra Modi) ಆಗಮಿಸಲಿದ್ದಾರೆ.
ಚನ್ನಪಟ್ಟಣ ತಾಲೂಕಿನ ಮತ್ತಿಕೆರೆ ಗ್ರಾಮದಲ್ಲಿ 30 ಎಕರೆಯಲ್ಲಿ ಜಾಗದಲ್ಲಿ ಬೃಹತ್ ಸಮಾವೇಶ ನಡೆಸಲು ಮುಂದಾಗಿದ್ದು ಸುಮಾರು 10ಕ್ಕೂ ಅಧಿಕ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಈ ಸಂದರ್ಭದಲ್ಲಿ ಮೋದಿಗಾಗಿ ಆಗಮಿಸಲಿದ್ದಾರೆ. ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳನ್ನು ಒಳಗೊಂಡಂತೆ ಸಮಾವೇಶ ನಡೆಯಲಿದ್ದು ಸುಮಾರು 2 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆಯಿದೆ.
ಈ ಕುರಿತು ಮಾಹಿತಿ ಹಂಚಿಕೊಂಡ ಚನ್ನಪಟ್ಟಣ ಬಿಜೆಪಿ ಅಭ್ಯರ್ಥಿ ಯೋಗೇಶ್ವರ್, ಕೋಲಾರದಲ್ಲಿ (Kolara) ಸಮಾವೇಶ ಮುಗಿಸಿ ಮಧ್ಯಾಹ್ನ 2ಕ್ಕೆ ಗೆ ಚನ್ನಪಟ್ಟಣಕ್ಕೆ ಮೋದಿ ಆಗಮಿಸಲಿದ್ದಾರೆ. ಚನ್ನಪಟ್ಟಣದಲ್ಲಿ ಸಮಾವೇಶಕ್ಕೆ ಅವಕಾಶ ಕೊಟ್ಟಿದ್ದು ಖುಷಿ ತಂದಿದೆ. ರಾಮನಗರ ರಾಜಕೀಯ ಇತಿಹಾಸದಲ್ಲಿ ಇದೊಂದು ಅದ್ಬುತ ಕಾರ್ಯಕ್ರಮ ಆಗಲಿದೆ ಎಂದು ಹೇಳಿದರು.
ಈ ಬಾರಿಯ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಲೇಬೇಕು ಎಂದು ಪಣ ತೊಟ್ಟಿರುವ ಬಿಜೆಪಿ ಕನಕಪುರದಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಆರ್.ಅಶೋಕ್ ಮತ್ತು ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಅವರನ್ನು ನಿಲ್ಲಿಸಿದೆ. ಮೇ 7ರವರೆಗೆ ಸುಮಾರು ಸುಮಾರು ಏಳು ದಿನಗಳ ಕಾಲ ಪ್ರಚಾರ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗುವ ಸಾಧ್ಯತೆಯಿದೆ. ಸುಮಾರು 20ಕ್ಕೂ ಹೆಚ್ಚು ಸಮಾವೇಶ ಆಯೋಜಿಸಲು ಪಕ್ಷ ಮುಂದಾಗಿದೆ. ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಸೇರಿದಂತೆ ಕೆಲ ಹಿರಿಯ ನಾಯಕರು ಕಾಂಗ್ರೆಸ್ ಸೇರ್ಪಡೆ, ಕೆಲವು ಕಡೆ ಟಿಕೆಟ್ ನಿರಾಕರಿಸಿದ್ದರಿಂದ ಕೆಲ ಕ್ಷೇತ್ರಗಳನ್ನು ಭಾರೀ ಸವಾಲು ಎದುರಿಸುತ್ತಿರುವ ಕಾರಣ ಬಿಜೆಪಿ ಈ ಬಾರಿ ಮೋದಿ ಕಾರ್ಯಕ್ರಮ ಹೆಚ್ಚು ಆಯೋಜಿಸಲು ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಒಟ್ಟು 224 ಕ್ಷೇತ್ರಗಳಿರುವುದರಿಂದ ಪ್ರತಿ 12-14 ಕ್ಷೇತ್ರಗಳಿಗೆ ಒಂದರಂತೆ ಬೃಹತ್ ಸಮಾವೇಶ (Modi Rally) ನಡೆಸಲು ಸಿದ್ಧತೆ ನಡೆದಿದೆ. ರಾಜ್ಯವನ್ನು 6 ಭಾಗವನ್ನಾಗಿ ವಿಂಗಡಿಸಿರುವ ಬಿಜೆಪಿ ಪ್ರದೇಶವಾರು, ಕಾಂಗ್ರೆಸ್ (Congress), ಜೆಡಿಎಸ್ (JDS) ಭದ್ರಕೋಟೆಯಲ್ಲಿ ಹೆಚ್ಚು ಸಮಾವೇಶ ಆಯೋಜಿಸಲಾಗಿದೆ.