Kornersite

Just In Karnataka State

PUC Result: ಪಿಯುಸಿಯಲ್ಲಿ ತಾಯಿ-ಮಗಳು ಇಬ್ಬರೂ ಒಂದೇ ಬಾರಿ ಪಾಸ್!

ಸುಳ್ಯ : ಸುಳ್ಯದಲ್ಲಿ ತಾಯಿ ಹಾಗೂ ಮಗಳು ಒಟ್ಟಿಗೆ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದು, ಎಲ್ಲೆಡೆ ಮೆಚ್ಚುಗೆ ಗಳಿಸುತ್ತಿದ್ದಾರೆ.

ಸುಳ್ಯ ಜಯನಗರದ ರಮೇಶ್‌ ಎಂಬವರ ಪತ್ನಿ ಗೀತಾ ಮತ್ತು ಅವರ ಪುತ್ರಿ ತ್ರಿಷಾ ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ ಹಾಗೂ ಮಗಳು. ಸುಳ್ಯ ಪೊಲೀಸ್‌ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿರುವ ಗೀತಾ ವೃತ್ತಿ ಜೀವನದ ಮಧ್ಯೆ ಅಧ್ಯಯನ ನಡೆಸಿ ಖಾಸಗಿಯಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದು 45ನೇ ವರ್ಷದಲ್ಲಿ ಪಾಸಾಗಿದ್ದಾರೆ. ಮಗಳು ತೃಷಾ ಸುಳ್ಯದ ಜೂನಿಯರ್‌ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಓದಿ ಪರೀಕ್ಷೆ ಬರೆದು ಪಾಸಾಗಿದ್ದಾರೆ.

25 ವರ್ಷದ ಹಿಂದೆ ಗೀತಾ ಅವರ ಹೈಸ್ಕೂಲ್‌ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದರು. ಅವರು ಎರಡು ವರ್ಷಗಳ ಹಿಂದೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದರು. ಈಗ ಪಿಯುಸಿ ಪರೀಕ್ಷೆಯನ್ನು ಸುಳ್ಯದ ಗಾಂಧಿನಗರ ಕಾಲೇಜಿನಲ್ಲಿ ಪರೀಕ್ಷೆ ಕಟ್ಟಿ, ಸುಳ್ಯದ ಜೂನಿಯರ್‌ ಕಾಲೇಜಿನಲ್ಲಿ ಪರೀಕ್ಷೆ ಬರೆದು ಪಾಸಾಗಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ