ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ್ ರಾಯಲ್ಸ್ ಎದುರು ರೋಚಕ ಜಯ ಗಳಿಸಿದೆ. ವಿರಾಟ್ ಕೋಹ್ಲಿ ನೇತೃತ್ವದಲ್ಲಿ ಆರ್ ಸಿಬಿ ತಂಡ ಎರಡು ಬಾರಿ ಗೆಲುವು ಸಾಧಿಸುವ ಮೂಲಕ್ ಅಂಕಪಟ್ಟಿಯಲ್ಲಿ 5ನೇ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ ನೀಡಿದ್ದ190 ರನ್ ಗಳ ಸವಾಲಿಗೆ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭ ಉತ್ತಮವಾಗಿರಲಿಲ್ಲ. ಆರಂಭಿಕ ಬ್ಯಾಟರ್ ಜೋಸ್ ಬಟ್ಲರ್ ಖಾತೆ ತೆರೆಯುವ ಮುನ್ನವೇ ಸಿರಾಜ್ ಬೌಲಿಂಗ್ ನಲ್ಲಿ ಕ್ಲೀನ್ ಬೋಲ್ಡ್ ಆದರು. ಆದರೆ ಎರಡನೇ ವಿಕೆಟ್ ಗೆ ದೇವದತ್ ಪಡಿಕ್ಕಲ್ ಹಾಗೂ ಜೈಸ್ವಾಲ್ ಎರಡನೇ ವಿಕೆಟ್ ಗೆ 98 ರನ್ ಗಳ ಜತೆಯಾಟವಾಡುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.
ಆಕರ್ಷಕ ಬ್ಯಾಟಿಂಗ್ ನಡೆಸಿದ ದೇವದತ್ ಪಡಿಕ್ಕಲ್ ಕೇವಲ್ 34 ಎಸೆತಗಳನ್ನು ಎದುರಿಸಿ 7 ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿ 52 ರನ್ ಪಡೆದಿದ್ದಾರೆ. ಕೊನೆಯ ೫ ಓವರ್ ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಗೆಲ್ಲಲು 69 ರನ್ ಗಳ ಅಗತ್ಯವಿತ್ತು. ನಾಯಕ ಸಂಜು 22 ರನ್ ಬಾರಿಸಿ ಹರ್ಶಲ್ ಪಟೇಲ್ ಗೆ ಎರಡನೇ ಬಲಿಯಾದರು. ಕೊನೆಯಲ್ಲಿ ಕೇವಲ 16 ಎಸೆತಗಳಲ್ಲಿ ಅಜೇಯ 34 ರನ್ ಗಳಿಸಿದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.
ಕೊನೆಯ ಓವರ್ ನಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲ್ಲಲು 20 ರನ್ ಗಳ ಅಗತ್ಯವಿತ್ತು. 20ನೇ ಓವರ್ ಬೌಲಿಂಗ್ ಮಾಡುವ ಜವಾಬ್ದಾರಿ ಹೊತ್ತ ಆರ್ ಸಿಬಿ ಡೆತ್ ಓವರ್ ಸ್ಪೆಷಲಿಸ್ಟ್ ಹರ್ಶಲ್ ಪಟೇಲ್ ಒಂದು ವಿಕೆಟ್ ಕಬಳಿಸಿ ಕೇವಲ 12 ರನ್ ನೀಡುವ ಮೂಲಕ್ ತಂಡಕ್ಕೆ ರೋಚಕ ಜಯ ತಂದುಕೊಟ್ತಿದ್ದಾರೆ.