Kornersite

Bengaluru Just In Karnataka State

SSLC Exam Result: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಯಾವಾಗ?

ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಭಾ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ. ಮಾರ್ಚ್ 31ರಿಂದ ಏ. 15ರ ವರೆಗೆ ಪರೀಕ್ಷೆ ನಡೆದಿತ್ತು. 15,498 ಶಾಲೆಗಳ 8,42,811 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

ಈ ಪೈಕಿ 5,833 ಸರ್ಕಾರಿ ಶಾಲೆಗಳು, 3,605 ಅನುದಾನಿತ ಶಾಲೆಗಳು ಹಾಗೂ 6,060 ಅನುದಾನ ರಹಿತರ ಶಾಲೆಗಳಿಂದ ಒಟ್ಟು 8,42,811 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. 7,94,611 ವಿದ್ಯಾರ್ಥಿಗಳು ಮೊದಲ ಬಾರಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿದ್ದು, 20,750 ಪುನರಾವರ್ತಿತ ವಿದ್ಯಾರ್ಥಿಗಳು, 18,272 ಖಾಸಗಿ ವಿದ್ಯಾರ್ತಿಗಳು, 8,862 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು, 2010ಕ್ಕಿಂತ ಹಿಂದಿನ ಸಾಲಿನ 301 ಪುನರಾವರ್ತಿತ ಅಭ್ಯರ್ಥಿಗಳು, 2010ಕ್ಕಿಂತ ಹಿಂದಿನ ಸಾಲಿನ 15 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳಿದ್ದರು.
ಏ. 24ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭಗೊಳ್ಳಲಿದ್ದು, ಇದಕ್ಕಾಗಿ 73 ಸಾವಿರ ಶಿಕ್ಷಕರ ನಿಯೋಜನೆ ಮಾಡಲಾಗಿದೆ.

ಮೌಲ್ಯಮಾಪನ ಕಾರ್ಯಕ್ಕೆ ಬೇಕಾದ ಎಲ್ಲ ಸಿದ್ಧತೆಗಳು ನಡೆದಿದೆ. ರಾಜ್ಯಾದ್ಯಂತ 236 ಕೇಂದ್ರಗಳಲ್ಲಿ 8.42 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ 50 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಚುನಾವಣಾ ಮತದಾನ ಮತ್ತು ಚುನಾವಣಾ ಫಲಿತಾಂಶದ ದಿನಾಂಕವನ್ನು ನೋಡಿಕೊಂಡು ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಮಂಡಳಿ ಅಧ್ಯಕ್ಷ ರಾಮಚಂದ್ರನ್ ಮಾಹಿತಿ ನೀಡಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ