Kornersite

Bengaluru Just In Karnataka Politics State

Karnataka Assembly Election: ಮತದಾರರನ್ನು ಸೆಳೆಯಲು ಮಹಾ ಪ್ರಚಾರ ಅಭಿಯಾನ ಆರಂಭಿಸಲಿರುವ ಬಿಜೆಪಿ!

Bangalore : ಮತದಾರರನ್ನು ಸೆಳೆಯಲು ಬಿಜೆಪಿ ವಿಭಿನ್ನ ಅಭಿಯಾನವನ್ನು ಹಮ್ಮಿಕೊಂಡಿದ್ದು, ಏಪ್ರಿಲ್ 25, 26 ರಂದು ಏಕಕಾಲದಲ್ಲಿ ರಾಜ್ಯಾದ್ಯಂತ ಮಹಾ ಪ್ರಚಾರ ಅಭಿಯಾನ ನಡೆಸುತ್ತಿದೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಜಿಲ್ಲೆ, ತಾಲ್ಲೂಕು, ರಾಜ್ಯ ರಾಷ್ಟ್ರೀಯ ಮಟ್ಟದ ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ. 224 ಕ್ಷೇತ್ರಗಳಲ್ಲಿ ಅಭಿಯಾನ ನಡೆಯಲಿದ್ದು, 98 ಜನರು ಕೇಂದ್ರ ಸಚಿವರು ಹಾಗೂ ನಾಯಕರು ಹಾಗೂ ಸುಮಾರು 150 ಮಂದಿ ರಾಜ್ಯ ನಾಯಕರು ಭಾಗಿಯಾಗಲಿದ್ದು, ನಾಲ್ಕು ದಿನ‌ ಯೋಗಿ ಪ್ರಚಾರ ನಡೆಸುತ್ತಾರೆ. ದಕ್ಷಿಣ ಕರ್ನಾಟಕ, ಕರಾವಳಿ ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕದಲ್ಲಿ ಯೋಗಿ ಪ್ರವಾಸ ನಡೆಸಲಿದ್ದಾರೆ.


ನಾಮಪತ್ರ ಸಲ್ಲಿಕೆ ಬಳಿಕ ರಾಷ್ಟ್ರೀಯ ನಾಯಕರ ಪ್ರವಾಸ ಆರಂಭವಾಗಿದೆ. ಮನೆ ಮನೆ ಭೇಟಿ ಅಭಿಯಾನವನ್ನು ಕಾರ್ಯಕರ್ತರು ನಡೆಸುತ್ತಿದ್ದಾರೆ. ಬೂತ್ ವಿಜಯ ಅಭಿಯಾನದ ಮೂಲಕ ಮನೆ ಮನೆ ಭೇಟಿ ಒಂದು ಸುತ್ತು ಪೂರ್ಣಗೊಂಡಿದೆ‌ ಎಂದು ಹೇಳಿದ್ದಾರೆ.

ಈ ಅಭಿಯಾನದಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ಧರ್ಮೇಂದ್ರ ಪ್ರಧಾನ್, ಯು.ಪಿ ಸಿಎಂ ಯೋಗಿ ಆದಿತ್ಯನಾಥ, ಸ್ಮೃತಿ ಇರಾನಿ, ಅಣ್ಣಾಮಲೈ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು. ಬಂಡಾಯಗಾರರ ಜೊತೆ ಮಾತುಕತೆ ಇನ್ನು ಹಲವು ಕಡೆ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಬಂಡಾಯ ಎದ್ದಿರುವವರ ಜೊತೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು