Kornersite

Bengaluru Just In Karnataka Politics State

Karnataka Assembly Election: ಬಿಜೆಪಿಯದ್ದು ಅಲಿಬಾಬಾ ಮತ್ತು 40 ಕಳ್ಳರ ಸರ್ಕಾರ!

Belagavi : ರಾಜ್ಯ ಸರ್ಕಾರವು ಅಲಿಬಾಬ ಮತ್ತು 40 ಕಳ್ಳರ ಸರ್ಕಾರ. ಬಿಜೆಪಿ ಸರ್ಕಾರ ಯಥೇಚ್ಛವಾಗಿ ಭ್ರಷ್ಟಾಚಾರ (Corruption) ಮಾಡಿದೆ. ಬಿಜೆಪಿ (BJP) ಅತ್ಯಂತ ಭ್ರಷ್ಟ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋಕಾಕ್ ನಗರದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಜನತೆ 2013ರಲ್ಲಿ ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿದ್ದರು. ನಾನು ಸಿಎಂ ಆಗಿದ್ದೆ. ನಮ್ಮ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇನೆ. ಸಮಾಜದ ಎಲ್ಲಾ ಬಡವರಿಗೆ ಕಾರ್ಯಕ್ರಮ ಕೊಡುವ ಕೆಲಸ ಮಾಡಿದ್ದೇನೆ. ನಮ್ಮದು ನುಡಿದಂತೆ ನಡೆದ ಸರ್ಕಾರ. ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ. 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಆದರೆ, ಬಿಜೆಪಿ ತಾನು ನೀಡಿದ 600 ಭರವಸೆಗಳಲ್ಲಿ ಕೇವಲ 50 ಭರವಸೆಗಳ್ನು ಮಾತ್ರ ಈಡೇರಿಸಿದೆ ಎಂದು ಆರೋಪಿಸಿದರು.

ಗೋಕಾಕ್ (Gokak) ಮತದಾರರು ಬದಲಾವಣೆ ಬೇಕು ಎಂದು ಈಗಾಗಲೇ ತೀರ್ಮಾನ ಮಾಡಿದ್ದಾರೆ. ಗುತ್ತಿಗೆದಾರರರ ಸಂಘ, ರುಪ್ಸಾದಿಂದ ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಕಮಿಷನ್ ಬಗ್ಗೆ ಪತ್ರ ಬಂದಿವೆ. ನಾನೂ ತಿನ್ನಲ್ಲ, ತಿನ್ನಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಾರೆ. ಕರ್ನಾಟಕದಲ್ಲಿ ಭ್ರಷ್ಟಾಚಾರ ಮಾಡಲು ಅವಕಾಶ ಮಾಡಿಕೊಟ್ಟಿದ್ದೇಕೆ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪ್ರಶ್ನೆ ಮಾಡಿದರು.

ನಾಲ್ಕು ವರ್ಷಗಳಲ್ಲಿ ಬಿಜೆಪಿ ಒಂದೇ ಒಂದು ಮನೆ ಮಂಜೂರು ಮಾಡಿಲ್ಲ. ರಮೇಶ್ ಜಾರಕಿಹೊಳಿ (Ramesh Jarkiholi) ಒಬ್ಬ ಹಿರಿಯ ನಾಯಕ. ನಾಲ್ಕು ವರ್ಷಗಳಲ್ಲಿ ಒಂದೇ ಒಂದು ಮನೆ ಕೊಡಿಸಲಾಗದವರು ಅಧಿಕಾರದಲ್ಲಿರಲು ಲಾಯಕ್ಕಾ ಅಥವಾ ನಾಲಾಯಕ್ಕಾ ಎಂದು ನೀವೇ ಹೇಳಿ? ಎಂದು ಪ್ರಶ್ನಿಸಿದ್ದಾರೆ.

ಬಸವಣ್ಣನ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ಅವರ ದಾರಿಯಲ್ಲಿ ನಡೆಯುತ್ತಿಲ್ಲ. ನಮಗೆ ಇನ್ನೊಮ್ಮೆ ಅಧಿಕಾರ ಕೊಡಿ. ನುಡಿದಂತೆ ನಡೆಯುತ್ತೇವೆ. ನಾಳೆ ನಮ್ಮ ಪ್ರಣಾಳಿಕೆ ಬಿಡುಗಡೆ ಆಗಲಿದೆ. ಈಗಾಗಲೇ ಗ್ಯಾರಂಟಿ ಕಾರ್ಡ್ ಕೊಟ್ಟಿದ್ದಾರೆ. ಬಿಜೆಪಿಯವರು ಜನರ ರಕ್ತ ಹೀರುತ್ತಿದ್ದಾರೆ. 200 ಯುನಿಟ್ ವಿದ್ಯುತ್ ಉಚಿತ, ಗೃಹಲಕ್ಷ್ಮಿ, ವಿದ್ಯಾನಿಧಿ ಯೋಜನೆ, ಅನ್ನಭಾಗ ಯೋಜನೆ ಕೊಡುತ್ತೇವೆ. 10 ಕೆಜಿ ಅಕ್ಕಿಯ ಬಗ್ಗೆ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ನಿರ್ಧಾರ ತೆಗೆದುಕೊಳ್ಳುವೆ ಎಂದು ಹೇಳಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು