Kornersite

Entertainment International Just In Sandalwood State

Sandalwood: ಜಪಾನ್ ನಲ್ಲಿ ನಟ ಸಾರ್ವಭೌಮನ ಹುಟ್ಟು ಹಬ್ಬ ಆಚರಣೆ!

ಡಾ. ರಾಜ್ ಕುಮಾರ್ (Dr. Rajkumar) ಅವರ 94ನೇ ಜನ್ಮದಿನವನ್ನು ವಿದೇಶಗಳಲ್ಲಿಯೂ ಅಭಿಮಾನಿಗಳು ಆಚರಿಸಿದ್ದಾರೆ. ಜಪಾನ್ ನಲ್ಲಿ ಅಣ್ಣಾವ್ರ ಅಭಿಮಾನಿಗಳು ರಾಜ್ ಕುಮಾರ್ ಫೋಟೋ ಮುಂದೆ ಕೇಕ್ ಕಟ್ ಮಾಡುವ ಮೂಲಕ ಹುಟ್ಟು ಹಬ್ಬ ಆಚರಿಸಿದ್ದಾರೆ. ಕನ್ನಡಿಗರ ಜೊತೆ ಸೇರಿಕೊಂಡ ಜಪಾನಿಯರು (Japan) ಸಂಭ್ರಮದಿಂದ ಡಾ.ರಾಜ್ ಅವರನ್ನು ಸ್ಮರಿಸಿದ್ದಾರೆ.

ಡಾ. ರಾಜ್ ಕುಮಾರ್ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದಾರೆ. ನೆಚ್ಚಿನ ನಟನ ಹೆಸರಿನಲ್ಲಿ ರಕ್ತದಾನ, ಅನ್ನದಾನ ಹಾಗೂ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಸಹಾಯ ಮಾಡುವ ಮೂಲಕ ಆಚರಿಸುತ್ತಿದ್ದಾರೆ. ನಿನ್ನೆಯಷ್ಟೇ ಅಣ್ಣಾವ್ರ ಮೊಮ್ಮಗನ ಹುಟ್ಟುಹಬ್ಬವನ್ನು ಆಚರಿಸಿದ್ದ ಅಭಿಮಾನಿಗಳು ಇಂದು ಮೇರುನಟನಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.

ಅಭಿಮಾನಿಗಳು ಇದ್ದೂರಿನಲ್ಲೇ ಹುಟ್ಟು ಹಬ್ಬ ಆಚರಿಸುತ್ತಿದ್ದರೆ, ಇನ್ನೂ ಹಲವರು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ (Kantheerava Studio) ಡಾ.ರಾಜ್ ಕುಮಾರ್ ಸ್ಮಾರಕಕ್ಕೆ ಬಂದು ಪೂಜೆ ಸಲ್ಲಿಸುತ್ತಿದ್ದಾರೆ. ಬೆಳಗ್ಗೆಯಿಂದಲೇ ಸ್ಮಾರಕಕ್ಕೆ ಅಭಿಮಾನಿಗಳು ದಂಡು ಹರಿದು ಬಂದಿದೆ. ಸ್ಮಾರಕದ ಮುಂದೆಯೇ ಅನ್ನಸಂತರ್ಪಣೆ, ಕೇಕ್ ಕತ್ತರಿಸುವುದು ಹಾಗೂ ರಕ್ತದಾನ, ನೇತ್ರದಾನ ಶಿಬಿರಗಳನ್ನು ಆಯೋಜನೆ ಮಾಡಲಾಗಿದೆ.

ಡಾ.ರಾಜ್ ಕುಟುಂಬದ ಸದಸ್ಯರು ಕೂಡ ಆಗಮಿಸಿ ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಪಕ್ಕದಲ್ಲೇ ಇರುವ ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಸಮಾಧಿಗಳಿಗೂ ಪೂಜೆ ಸಲ್ಲಿಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,