Kornersite

Bengaluru Entertainment Gossip Just In Karnataka Sandalwood State

ಮಾಧ್ಯಮಗಳಿಗೆ ದರ್ಶನ್ ಕ್ಷಮೆ ಕೇಳಿದ್ದಾರೆ ಎನ್ನಲಾದ ಪತ್ರ: ಸಾಮಾಜಿಕ ಜಾಲತಾಣದಲ್ಲಿ ವೈರಲ್!

ಡಿ ಬಾಸ್ ಮಾಧ್ಯಮಗಳ ಕ್ಷಮೆ ಯಾಚಿಸಿರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯಾವುದೋ ಗಳಿಗೆಯಲ್ಲಿ ಕೆಲವು ಅಚಾತುರ್ಯದಿಂದ ಮಾತನಾಡಿರುತ್ತೇನೆ. ಮಾಧ್ಯಮ ಸಹೋದರರಿಗೆ-ಸಹೋದರಿಯರಿಗೆ ನೋವು ಉಂಟಾಗಿರುವುದರಿಂದ ಅದನ್ನು ನಾನು ವಿಷಾದಿಸುತ್ತೇನೆ ಎಂದು ದರ್ಶನ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಹರಿದಾಡುತ್ತಿದೆ.


ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಧ್ಯಮಗಳ ಬಗ್ಗೆ ಅವಾಚ್ಯ ಶಬ್ದಗಳಿಂದ ಜರಿದಿದ್ದಾರೆ ಎಂಬ ಆಡಿಯೋ ಕೆಲ ದಿನಗಳ ಹಿಂದೆ ವೈರಲ್ ಆಗಿತ್ತು. ದರ್ಶನ್ ಮಾತನಾಡಿದ್ದಾರೆ ಎನ್ನಲಾಗಿದ್ದ ಆಡಿಯೋ ವೈರಲ್ ಆಗುತ್ತಿದ್ದಂತೆ ವಿದ್ಯುನ್ಮಾನ ಮಾಧ್ಯಮಗಳು ದರ್ಶನ್ ಅವರನ್ನು ಅವರನ್ನು ಅಘೋಷಿತ ಬ್ಯಾನ್ ಮಾಡಿದ್ದವು. ದರ್ಶಶನ್ ಅವರು ಬರೆದಿದ್ದಾರೆ ಎನ್ನಲಾದ ಪತ್ರ ಸುದ್ಧಿಮಾಧ್ಯಮ ಕಚೇರಿಗಳಿಗೆ ತಲುಪಿದೆ.

ಎಲ್ಲಾ ಮಾಧ್ಯಮ ಮಿತ್ರರಿಗೂ ನಮಸ್ಕಾರ… 75 ವರ್ಷಗಳ ಇತಿಹಾಸವಿರುವ ಕನ್ನಡ ಚಿತ್ರರಂಗದಲ್ಲಿ ಅಳಿಸಲಾಗದ ಕೆಲವು ವ್ಯಕ್ತಿಗಳು ಮತ್ತು ಕೆಲವು ಹೆಸರುಗಳು ಮಾತ್ರ ಚರಿತ್ರೆಯಲ್ಲಿ ಉಳಿದಿರುತ್ತವೆ. ಆ ಸಾಲಿನಲ್ಲಿ ಡಾ ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಂಕರ್ ನಾಗ್, ತೂಗುದೀಪ ಶ್ರೀನಿವಾಸ್, ಬಾಲಕೃಷ್ಣ, ದಿನೇಶ್ ಇವರ ಸಮಕಾಲೀನ ದಿಗ್ಗಜರುಗಳನ್ನು ಕರ್ನಾಟಕದ ಜನತೆ ಮೆಚ್ಚಿಕೊಂಡು ಮೆರೆಸಿದರು.

ಒಪ್ಪುವ ಮಾಧ್ಯಮಗಳು ಮತ್ತು ದೃಶ್ಯ ಮಾಧ್ಯಮಗಳು ಪ್ರೋತ್ಸಾಹಿಸಿರುತ್ತೀರಿ. ಈ ಸಾಲಿನಲ್ಲಿ ಇದ್ದಂತಹ ಕನ್ನಡ ಚಿತ್ರರಂಗ ಮರೆಯಲಾಗದಂತಹ ನಟ ತೂಗುದೀಪ ಶ್ರೀನಿವಾಸ್ ರವರ ಕುಟುಂಬದಿಂದ ಬಂದಂತಹ ಸಣ್ಣ ಕುಡಿ ನಾನು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದಾಗ ನನ್ನನ್ನು ಆಶೀರ್ವದಿಸಿ ಪ್ರೋತ್ಸಾಹಿಸಿ ಹಲವಾರು ಬಾರಿ ನಾನು ಮಾಡಿರುವ ಪಾತ್ರಗಳ ಬಗ್ಗೆ ವಿಶ್ಲೇಷಣೆ ಮಾಡಿ, ನನ್ನ ಪಾತ್ರದಲ್ಲಿರುವ ತಪ್ಪುಗಳನ್ನು ತಿದ್ದಿ ಹೇಳಿರುವಿರಿ. ನಾನು ಸಹ ಮುಂದಿನ ದಿನಗಳಲ್ಲಿ ಮಾಡಿರುವಂತ ಚಿತ್ರಗಳಲ್ಲಿ ನನ್ನ ಪಾತ್ರಗಳಲ್ಲಿ ಬರುವ ತಪ್ಪುಗಳ ಬಗ್ಗೆ ಎಚ್ಚೆತ್ತುಕೊಂಡು ಉತ್ತಮ ಚಿತ್ರಗಳನ್ನು ಆಯ್ಕೆ ಮಾಡಿಕೊಂಡಿರುವೆನು.

ಅದೇ ರೀತಿಯಲ್ಲಿ ನಿಜ ಜೀವನದಲ್ಲಿ ಸಹ ಯಾವುದೋ ಒಂದು ಗಳಿಗೆಯಲ್ಲಿ ಕೆಲವು ಅಚಾತುರ್ಯದಿಂದ ಮಾತನಾಡಿರುತ್ತೇನೆ. ಮಾಧ್ಯಮ ಸಹೋದರರಿಗೆ-ಸಹೋದರಿಯರಿಗೆ ನೋವು ಉಂಟಾಗಿರುವುದರಿಂದ ಅದನ್ನು ನಾನು ವಿಷಾದಿಸುತ್ತೇನೆ. ಜೀವನವೆಂಬುದು ಬಹಳ ಅಮೂಲ್ಯ ಹಾಗೂ ತುಂಬಾ ಚಿಕ್ಕದ್ದು, ಈ ಚಿಕ್ಕ ಸಮಯದಲ್ಲಿ ನಗು ನಗುತಾ ಬಾಳೋಣ. ನನ್ನ ಈ ಭಾವನೆಯನ್ನು ನನ್ನ ಎಲ್ಲಾ ಮಿತ್ರರು ಹಾಗೂ ಅಭಿಮಾನಿಗಳು ಅರ್ಥ ಮಾಡಿಕೊಂಡು ಗೌರವಿಸಬೇಕು. ಇಂತಿ ನಿಮ್ಮ ದಾಸ (ದರ್ಶನ್ ತೂಗುದೀಪ)

ಎಂದು ದರ್ಶನ್ ತೂಗುದೀಪ ಲೆಟರ್ ಹೆಡ್ ಪತ್ರದಲ್ಲಿ ಬರೆಯಲಾಗಿದೆ. ನಿಜವಾಗಿಯೂ ದರ್ಶನ್ ಬರೆದರಾ? ಇಲ್ಲ ಇದು ನಕಲಿ ಪತ್ರವೇ? ಎನ್ನು ಅನುಮಾನ ಕೆಲವರನ್ನು ಕಾಡುತ್ತಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,