Kornersite

Bengaluru Just In Karnataka Politics State

DB Inamdar: ಮಾಜಿ ಸಚಿವ ಡಿ.ಬಿ. ಇನಾಮದಾರ್ ವಿಧಿವಶ!

ಚನ್ನಮ್ಮನ ಕಿತ್ತೂರಿನಿಂದ 5 ಬಾರಿ ಶಾಸಕರಾಗಿದ್ದ ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಡಿ.ಬಿ. ಇನಾಮದಾರ್ ಸಾವನ್ನಪ್ಪಿದ್ದಾರೆ.

ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ಒಂದು ತಿಂಗಳಿನಿಂದಲೂ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಸಾವನ್ನಪ್ಪಿದ್ದಾರೆ. 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿ ಗೆಲುವು ಸಾಧಿಸಿದ್ದರು. 1994 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈವರೆಗೆ 9 ಚುನಾವಣೆ ಎದುರಿಸಿದ್ದ ಇನಾಮ್ದಾರ್‌ 1983, 1985 ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಜಯಗಳಿಸಿದ್ದರು. 1989, 2004, 2008 ಹಾಗೂ 2018 ರಲ್ಲಿ ಸೋಲು ಕಂಡಿದ್ದರು. ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು, ಎಸ್.ಎಂ ಕೃಷ್ಣ, ಎಸ್. ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು.


2023ರ ಚುನಾವಣೆಯಲ್ಲಿ ಡಿ.ಬಿ ಇನಾಮ್ದಾರ್‌ ಕಿತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಬಾಸಾಹೇಬ್ ಪಾಟೀಲ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಲಾಗಿತ್ತು.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು