ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ (ICC World Test Championship Final) ಪಂದ್ಯಕ್ಕೆ ಈಗಾಗಲೇ ಆಸ್ಟ್ರೇಲಿಯಾ ತಂಡವನ್ನು ಇತ್ತೀಚೆಗಷ್ಟೇ ಪ್ರಕಟಿಸಲಾಗಿತ್ತು. ಸದ್ಯ ಬಿಸಿಸಿಐ ಭಾರತೀಯ ತಂಡವನ್ನು ಪ್ರಕಟಿಸಿದೆ.

ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ 2ನೇ ಆವೃತ್ತಿಯ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಜೂನ್ 7 ರಿಂದ 11ರ ವರೆಗೆ ಲಂಡನ್ ದಿ ಓವಲ್ ಮೈದಾನದಲ್ಲಿ ನಡೆಯಲಿದೆ. ಗಾಯಾಳುವಾಗಿರುವ ಜಸ್ ಪ್ರೀತ್ ಬುಮ್ರಾ ತಂಡ ಸೇರಿಲ್ಲ. ರಹಾನೆ ತಂಡ ಸೇರಿದ್ದಾರೆ. ಶುಭ್ಮನ್ ಗಿಲ್ ತಂಡದಲ್ಲಿ ಉಳಿದಿದ್ದಾರೆ. ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್ಗೆ ವಿಶ್ರಾಂತಿ ನೀಡಲಾಗಿದೆ. ಕೆ.ಎಸ್. ಭರತ್ ಹಾಗೂ ರಾಹುಲ್ ವಿಕೆಟ್ ಕೀಪರ್ ಆಗುವ ಸಾಧ್ಯತೆ ಇದೆ.

ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ ಮಧ್ಯಮ ಕ್ರಮಾಂಕದ ಬಲವಾಗಿದ್ದಾರೆ. ಆಲ್ರೌಂಡರ್ಗಳಾಗಿ ನಾಲ್ವರು ಆಯ್ಕೆ ಆಗಿದ್ದಯ ರವಿಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಥಾಕೂರ್ ಹಾಗೂ ರವಿಚಂದ್ರನ್ ಅಶ್ವಿನ್ ಆಯ್ಕೆಯಾಗಿದ್ದಾರೆ. ವೇಗಿಗಳ ವಿಭಾಗದಲ್ಲಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಜಯದೇವ್ ಉನಾದ್ಕಟ್ ಇದ್ದಾರೆ.

ಬಾರತ ತಂಡದಲ್ಲಿ ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್ ಇದ್ದಾರೆ.