Kornersite

Bengaluru Just In Karnataka Politics State

Karnataka Assembly Election: ಬಿಸಿಲ ನಾಡಿನಲ್ಲಿ ಅಮಿತ್ ಶಾ ಮತ ಬೇಟೆ!

yadagiri : ರಾಜ್ಯದಲ್ಲಿ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಬಿಸಿಲಿನಂತೆ, ರಾಜಕೀಯ ಕಾವು ಕೂಡ ಹೆಚ್ಚಾಗುತ್ತಿದೆ. ಇದರ ಮಧ್ಯೆಯೂ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ಆರಂಭಿಸಿವೆ.

ಗಿರಿನಾಡು ಯಾದಗಿರಿ (Yadgiri) ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ನಡೆಯುತ್ತಿದೆ. ಮತ್ತೊಮ್ಮೆ ಸರ್ಕಾರ ರಚಿಸುವ ಭರವಸೆಯಲ್ಲಿರುವ ಬಿಜೆಪಿ (BJP) ನಾಯಕರು ತಂತ್ರ- ಪ್ರತಿತಂತ್ರ ಹೆಣೆದು, ಭರ್ಜರಿಯಾಗಿ ಪ್ರಚಾರ ಕೈಗೊಂಡಿದ್ದಾರೆ.


ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಪ್ರಚಾರ ನಡೆಸುತ್ತಿರುವ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಇಂದು (ಮಂಗಳವಾರ) ಯಾದಗಿರಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ವೆಂಕಟರೆಡ್ಡಿ ಮುದ್ನಾಳ್ (Venkatreddy Mudnal) ಪರ ಭರ್ಜರಿ ರೋಡ್ ಶೋ (Road Show) ನಡೆಸಿ, ಮತಯಾಚಿಸಿದ್ದಾರೆ.


ಸಂಜೆ 4:20ಕ್ಕೆ ಯಾದಗಿರಿ ನಗರಕ್ಕೆ ಆಗಮಿಸಲಿರುವ ಅಮಿತ್ ಶಾ, ಯಾದಗಿರಿ ನಗರದ ಸರ್ಕಾರಿ ಡಿಗ್ರಿ ಕಾಲೇಜಿನ ಹತ್ತಿರದಿಂದ ಶಾಸ್ತ್ರೀ ಸರ್ಕಲ್‌ವರೆಗೂ ರೋಡ್ ಶೋ ನಡೆಸಲಿದ್ದಾರೆ. 4:20ರಿಂದ 5:30ರವರೆಗೂ ರೋಡ್ ಶೋ ನಡೆಯಲಿದೆ. ರೋಡ್ ಶೋನಲ್ಲಿ 20 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗುವ ನಿರೀಕ್ಷೆಯಿದೆ. ಹೀಗಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಜಿಲ್ಲಾ ಸಶಸ್ತ್ರ ಪಡೆ, ಪ್ಯಾರಾ ಮಿಲಿಟರಿ ಫೋರ್ಸ್ ಜೊತೆಗೆ ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಐವರು ಡಿವೈಎಸ್ಪಿ ಸೇರಿದಂತೆ 50ಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. ಡ್ರೋನ್ ಕಣ್ಗಾವಲಿನಲ್ಲಿ ರೋಡ್ ಶೋ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಲಾಗಿದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು