Bangalore : ಬಿಜೆಪಿ ಪಕ್ಷದಲ್ಲಿ ಕಡೆಗಣಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ಸೇರಿದ ಜಗದೀಶ್ ಶೆಟ್ಟರ್ (Jagadish Shettar) ಹಾಗೂ ಲಕ್ಷ್ಮಣ ಸವದಿ (Lakshman Savadi) ಅವರನ್ನು ಸೋಲಿಸಲು ಬಿಜೆಪಿಯಲ್ಲಿ ಟಾರ್ಗೆಟ್ ಫಿಕ್ಸ್ ಮಾಡಲಾಗಿದೆ. ಈ ಇಬ್ಬರು ನಾಯಕರನ್ನು ಸೋಲಿಸಲು ಲಿಂಗಾಯತ ವೋಟ್ ಬ್ಯಾಂಕ್ (Lingayat Vote Bank) ಉಳಿಸಿಕೊಳ್ಳಲು ಬಿಜೆಪಿ ನಾಯಕರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ.

ಅವಿಭಜಿತ ಧಾರವಾಡ ಜಿಲ್ಲೆಯ 175 ನಾಯಕರ ಜೊತೆ ಅಮಿತ್ ಶಾ (Amit Shah) ಚರ್ಚೆ ನಡೆಸಿದ್ದಾರೆ. ಬಿಎಸ್ ಯಡಿಯೂರಪ್ಪ (BS Yediyurappa) ನಿವಾಸಕ್ಕೆ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santosh) ಧಾವಿಸಿ, ಮಹತ್ವದ ಸಮಾಲೋಚನೆ ನಡೆಸಿದ್ದಾರೆ.

ಜಗದೀಶ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಸೋಲಿಸಲು ಯಡಿಯೂರಪ್ಪ ಮತ್ತು ಬೊಮ್ಮಾಯಿಗೆ ಹೈಕಮಾಂಡ್ ಟಾಸ್ಕ್ ನೀಡಲಾಗಿದೆ ಎಂದು ತಿಳಿದು ಬಂದಿದೆ. ಬುಧವಾರ ಅಥಣಿ, ಹುಬ್ಬಳ್ಳಿ ಧಾರವಾಡದಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ ಶೆಟ್ಟರ್ ವಿರುದ್ಧ ವಾಗ್ದಾಳಿ ನಡೆಸಲಿದ್ದಾರೆ. ಅಮಿತ್ ಶಾ ಅವರು ಹುಬ್ಬಳ್ಳಿಯಲ್ಲಿ ಶೆಟ್ಟರ್ ಅವರನ್ನು ಕನಿಷ್ಠ 25 ಸಾವಿರ ಮತಗಗಳ ಅಂತರದಿಂದ ಸೋಲಿಸಬೇಕು ಎಂದು ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ.