Kornersite

Bengaluru Just In Karnataka Politics State

Karnataka Assembly Election: ಲಿಂಗಾಯತ ಹೇಳಿಕೆ ವಿಚಾರ; ಮಾಜಿ ಸಿಎಂ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು!

Bangalore : ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಯಲ್ಲಿ ಹೇಳಿಕೆ ನೀಡುವ ಸಂದರ್ಭದಲ್ಲಿ ಲಿಂಗಾಯತರ ವಿರುದ್ಧ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮಾನನಷ್ಟ ಮೊಕದ್ದಮೆ (Defamation case) ದಾಖಲಿಸಲಾಗಿದೆ.

ಶಂಕರ್ ಶೇಟ್ ಎಂಬುವವರು ಮ್ಯಾಜಿಸ್ಟ್ರೇಟ್ ಕೋರ್ಟ್‌ ಗೆ (Magistrate Court) ದೂರು ನೀಡಿದ್ದು, ಕೋರ್ಟ್ ವಿಚಾರಣೆಯನ್ನು ಏ. 29ಕ್ಕೆ ಮುಂದೂಡಿದೆ. ಲಿಂಗಾಯತ ಸಿಎಂ ಭ್ರಷ್ಟಾಚಾರ ಎಸಗಿ, ರಾಜ್ಯ ಹಾಳು ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ. ಒಂದೆಡೆ ಬಿಜೆಪಿ ನಾಯಕರು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಇನ್ನೊಂದೆಡೆ ಸಮುದಾಯದ ಜನರು ಕಿಡಿ ಕಾರುತ್ತಿದ್ದಾರೆ. ಇದರ ಬೆನ್ನಲ್ಲಿಯೇ ಲಿಂಗಾಯತ ಸಮುದಾಯದ ಹಲವು ನ್ಯಾಯವಾದಿಗಳು ದೂರು ಸಲ್ಲಿಸಿದ್ದರು. ಈಗ ಮಾನನಷ್ಟ ಮೊಕದ್ದಮೆ ಕೂಡ ದಾಖಲಾಗಿದೆ.

ಮಾಜಿ ಸಿಎಂ ಇಡೀ ಲಿಂಗಾಯತ ಸಮುದಾಯವನ್ನೇ ನಿಂದಿಸಿದ್ದಾರೆ. ಲಿಂಗಾಯತ ಸಮುದಾಯವನ್ನ ತೇಜೋವಧೆ ಮಾಡಿದ್ದಾರೆ. ಕೂಡಲೇ ಸಿದ್ದರಾಮಯ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಆಗ್ರಹಿಸಲಾಗಿತ್ತು. ಸದ್ಯ ಇದನ್ನೇ ಬಂಡವಾಳವಾಗಿಸಿಕೊಂಡಿರುವ ಬಿಜೆಪಿ, ಸಿದ್ದರಾಮಯ್ಯ ಅವರನ್ನು ಹಣಿಯುವ ಕಾರ್ಯ ಮಾಡುತ್ತಿದೆ. ಲಿಂಗಾಯತ ಸಮುದಾಯವು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಟಾರ್ಗೆಟ್ ಆಗಿದೆ. ಸಿದ್ದರಾಮಯ್ಯ ಯಾವಾಗಲೂ ಲಿಂಗಾಯತರನ್ನು ಅವಮಾನಿಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.


ಆದರೆ, ಇದಕ್ಕೆ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ನಾನು ಬೊಮ್ಮಾಯಿಗೆ ಮಾತ್ರ ಭ್ರಷ್ಟ ಎಂದು ಹೇಳಿದ್ದೇನೆ. ನನಗೆ ಲಿಂಗಾಯತ ಸಮುದಾಯದ ಕುರಿತು ಅಪಾರ ಗೌರವವಿದೆ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎದು ಹೇಳಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು