bangalore : ರಾಜ್ಯದಲ್ಲಿ ಇಂದು ರಾತ್ರಿಯಿಂದ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ (Karnataka Rains) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಲ್ಲದೇ, ಬೆಂಗಳೂರು ನಗರದಲ್ಲಿ 5 ದಿನಗಳ ಕಾಲ ಮಳೆಯಾಗುವ (Bengaluru Rains) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಬೆಂಗಳೂರಿಗೆ ಮಳೆಯ ಅಲರ್ಟ್ ನೀಡಲಾಗಿದ್ದು, ಚಾಮರಾಜನಗರ, ಚಿಕ್ಕಮಗಳೂರು ಕೊಡಗು, ಜಿಲ್ಲಿಗೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿಗೆ ಹೆಚ್ಚಿನ ಮಳೆಯಾಗುವ ಸಾಧ್ಯಾತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡುಗು, ಮಂಡ್ಯ, ಚಿಕ್ಕಬಳ್ಳಪುರ, ಚಿಕ್ಕಮಗಳೂರು, ಮೈಸೂರು, ರಾಮಾನಗರ, ಕೋಲಾರ, ಮಳೆಯಾಗುವ ಸಾಧ್ಯಾತೆ ಇದೆ. ಅಲ್ಲದೇ, ಚಾಮರಾಜನಗರ, ಚಿಕ್ಕಮಗಳೂರು ಕೊಡಗು, ಜಿಲ್ಲಿಗೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ ಬೀದರ್, ಕಲ್ಬುರ್ಗಿ, ರಾಯಚೂರು, ಯಾದಗಿರಿ, ಜಿಲ್ಲೆಗಳಿಗೆ ಮಳೆಯ ಎಚ್ಚರಿಕೆ ನೀಡಲಾಗಿದೆ. ಕಾರಾವಾಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯಾತೆ ಇದೆ. ಬೆಂಗಳೂರಿಗೆ ಇಂದಿನಿಂದ 5 ದಿನ ಮಳೆ ಇರಲಿದೆ. ಇಂದು ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಂಜೆ ನಂತರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.