Kornersite

Bengaluru Crime Just In Karnataka State

Crime News: ರ‍್ಯಾಪಿಡೋ ಚಾಲಕನಿಂದ ಕಿರುಕುಳ; ಚಲಿಸುತ್ತಿದ್ದ ಬೈಕ್ ನಿಂದಲೇ ಜಿಗಿದ ಯುವತಿ!

ರ‍್ಯಾಪಿಡೋ (Rapido) ಬೈಕ್‌ ನಲ್ಲಿ ಚಲಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಯಲಹಂಕದ ಹೊರವಲಯದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಬೈಕ್ ನಲ್ಲಿದ್ದ ಯುವತಿ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್‌ನಿಂದಲೇ ಜಿಗಿದಿದ್ದಾಳೆ. ಬೆಂಗಳೂರಿನ ಯಲಹಂಕ ಉಪನಗರ ನಾಗೇನಹಳ್ಳಿ ಠಾಣಾ (Yelahanka Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಖಾಸಗಿ ಕಂಪನಿಯಲ್ಲಿ ಆರ್ಕಿಟೆಕ್ಚರ್ ಆಗಿ ಕೆಲಸ ಮಾಡ್ತಿದ್ದ ಯುವತಿ, ಏಪ್ರಿಲ್‌ 21 ರಂದು ಯಲಹಂಕದಿಂದ ಇಂದಿರಾನಗರಕ್ಕೆ ತೆರಳಲು ರ‍್ಯಾಪಿಡೋ ಬುಕ್‌ ಮಾಡಿದ್ದರು. ಬೈಕ್‌ (Rapido Bike) ಸವಾರ ಓಟಿಪಿ ಪಡೆಯುವ ನೆಪದಲ್ಲಿ ಮೊಬೈಲ್‌ ಕಸಿದುಕೊಂಡಿದ್ದಾನೆ. ನಂತರ ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇದರಿಂದ ಬೇಸತ್ತ ಯುವತಿ ಚಲಿಸುತ್ತಿದ್ದ ಬೈಕ್‌ನಿಂದ ಜಿಗಿದಿದ್ದಾಳೆ.

ನಂತರ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾಳೆ. ದೂರಿನ ಆಧಾರದ ಮೇರೆಗೆ ಕೇಸ್‌ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಆಂಧ್ರಪ್ರದೇಶ ಮೂಲದ ದೀಪಕ್‌ ರಾವ್‌ ಎಂಬಾತನನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ