ಒಕ್ಕಲಿಗರ ಹಾಗೂ ಜೆಡಿಎಸ್, ಕಾಂಗ್ರೆಸ್ ಭದ್ರಕೋಟೆಯಲ್ಲಿ ಕಮಲ ಅರಳಿಸಲು ಮುಂದಾಗಿರುವ ಬಿಜೆಪಿ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಇಂದು ರಾಜ್ಯಕ್ಕೆ ಆಹ್ವಾನಿಸಿದ್ದಾರೆ.

ಹೀಗಾಗಿ ಇಂದು ರಾಜ್ಯದ ಹಲವೆಡೆ ಸಿಎಂ ಯೋಗಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಬಸವನಬಾಗೇವಾಡಿಯಲ್ಲಿಂದು ಯೋಗಿ ಮತಶಿಕಾರಿ ನಡೆಯಲಿದೆ. ಆದಿತ್ಯನಾಥ್ ಅವರು, 11 ಗಂಟೆಗೆ ಮಂಡ್ಯದಲ್ಲಿ ನಡೆಯುವ ರೋಡ್ ಶೋ ಮತ್ತು ಪ್ರಚಾರ ಸಭೆಯಲ್ಲಿ ಭಾಗಿಯಾಗುತ್ತಾರೆ. ನಂತರ ಮಧ್ಯಾಹ್ನ 2.40ಕ್ಕೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಸವೇಶ್ವರರ ದರ್ಶನ ಪಡೆದು ಮಧ್ಯಾಹ್ನ 3.05ಕ್ಕೆ ಬಸವನಬಾಗೇವಾಡಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಕೆ.ಬೆಳ್ಳುಬ್ಬಿ ಪರ ಪ್ರಚಾರ ಮಾಡಲಿದ್ದಾರೆ.

ಸಂಜೆ 4.50ಕ್ಕೆ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಂಡು ಇಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ್ ಪರ ಮತಯಾಚಿಸಲಿದ್ದಾರೆ. ಸಮಾವೇಶ ಮುಗಿದ ಬಳಿಕ ಉತ್ತರ ಪ್ರದೇಶದ ಲಖನೌಗೆ ನಿರ್ಗಮಿಸಲಿದ್ದಾರೆ. ರಾಮನಗರ, ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಚಾಣಕ್ಯ ಯೋಗಿ ಆದಿತ್ಯನಾಥ್ ಒಕ್ಕಲಿಗರ ಗಮನ ಸೆಳೆಯಲಿದ್ದಾರೆ.