Chamarajanagar : ಜಿಲ್ಲೆಯ ಹನೂರಿನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭರ್ಜರಿಯಾಗಿ ಪ್ರಚಾರ ನಡೆಸಿದ್ದು, ಮಹಿಳಾ ಕಾರ್ಯಕರ್ತೆಯರೊಂದಿಗೆ ಸಂವಾದ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಮಹಿಳೆಯರು ತಮ್ಮ ಸಮಸ್ಯೆಗಳ ಕುರಿತು ಹಂಚಿಕೊಂಡರು. ಜಿಲ್ಲೆಯ ಹನೂರಿನಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿಯೂ ಕಾರಿನಿಂದ ಇಳಿದು ಜನರ ಬಳಿ ತೆರಳಿದ ಪ್ರಿಯಾಂಕಾ ಗಾಂಧಿ ಹಸ್ತಲಾಘವ ಕೊಟ್ಟು, ನಮಸ್ಕಾರ ಮಾಡಿದರು.
ಕಾರ್ಯಕ್ರಮ ಮುಗಿದ ಮೇಲೆ ಕೂಡ ವೇದಿಕೆಯಿಂದ ಇಳಿದು ಜನರ ಬಳಿ ಮಿಂಚಿನ ಸಂಚಾರ ನಮಾಡಿದರು. ಡೆಸಿ ಗಮನ ಸೆಳೆದರು. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ.
ಸಮಾವೇಶದಲ್ಲಿ 10 ರಿಂದ 12 ಸಾವಿರದಷ್ಟು ಮಹಿಳೆಯರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯೊಬ್ಬರು ಇಂದಿರಾ ಗಾಂಧಿಯಂತೆ ಇದ್ದೀರಿ ಎಂದಾಗ ಸಂತಸ ಪಟ್ಟು ಅವರನ್ನು ತಬ್ಬಿಕೊಂಡು ಪ್ರೀತಿಯಿಂದ ಮಾತನಾಡಿಸಿದ್ದಾರೆ.