Bangalore: ಹಿರಿಯ ಸಾಹಿತಿ ದೇವನೂರು ಮಹಾದೇವ(Devanur Mahadeva) ಅವರು ಸಂಘ ಪರಿವಾರದ ವಿರುದ್ಧ ಗುಡುಗಿದ್ದಾರೆ. ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎದ್ದೇಳು ಕರ್ನಾಟಕ ಸಂಘವು ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ಸರ್ಕಾರದ ಆಡಳಿತವನ್ನು ಟೀಕಿಸಿದ್ದಾರೆ. ಸಾಹಿತಿ ದೇವನೂರ ಮಹಾದೇವ, ಮತದಾರರು ಹೆಚ್ಚು ಜಾಗೃತರಾಗಿದ್ದಾರೆ. ಅವರು ಇಲ್ಲಿಯವರೆಗೆ ಇಷ್ಟೊಂದು ಜಾಗೃತರಾಗಿರಲಿಲ್ಲ. ಈಗ ಅವರು ಸ್ಪರ್ಧಿಗಳಿಗೆ ಬೆವರಿಳಿಸುತ್ತಿದ್ದಾರೆ. ಡಬಲ್ ಎಂಜಿನ್ ಸರ್ಕಾರ ಅಂತಾ ಕೇಳಿ ಕೇಳಿ ಕಿವಿ ತೂತು ಆಗಿದೆ. ಡಬಲ್ ಎಂಜಿನ್ ಸರ್ಕಾರ ಅಂತಾ ಹೇಳಿ ಅಭಿವೃದ್ಧಿಯ ಬುಡ ಅಲ್ಲಾಡಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತ್ ಜೋಡೊ ಯಾತ್ರೆಯ ನಂತರ ಕಾಂಗ್ರೆಸ್ ಚೇತರಿಸಿಕೊಂಡಿದೆ. ಕಾಂಗ್ರೆಸ್ ಬಲವಾಗಿ ಇಲ್ಲದ ಕಡೆ ಜೆಡಿಎಸ್‌ನ್ನು ಗೆಲ್ಲಿಸೋಣ. ಬಿಜೆಪಿಯನ್ನು ಸೋಲಿಸೋಣ ಎಂದರು. ಹಿರಿಯ ಸಾಹಿತಿ ರಹಮತ್ ತರೀಕೆರೆ, ರೈತ ಹೋರಾಟಗಾರ ವೀರಸಂಗಯ್ಯ ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ಯೋಗೇಂದ್ರ ಯಾದವ್ ಇದ್ದರು.