Kornersite

Bengaluru Just In Karnataka National Politics State

Karnataka Assembly Election: ಜೆಡಿಎಸ್, ಕಾಂಗ್ರೆಸ್ ಭದ್ರಕೋಟೆಗೆ ಲಗ್ಗೆಯಿಡಲಿರುವ ಪ್ರಧಾನಿ!

Bangalore: ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಎಲ್ಲ ಪಕ್ಷಗಳ ನಾಯಕರು ಮತಬೇಟೆ ಆರಂಭಿಸಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು 6 ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರಚಾರ ನಡೆಸಲಿದ್ದಾರೆ.

ಮೇ. 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಏಣಿಕೆ ನಡೆಯಲಿದೆ. ಮತ್ತೊಮ್ಮೆ ಅಧಿಕಾರಕ್ಕೆ ಪಕ್ಷವನ್ನು ತರಲೇಬೇಕು ಎಂದು ಬಿಜೆಪಿ ಹರಸಾಹಸ ಪಡುತ್ತಿದೆ. ಈ ಬಾರಿಯೂ ಮೋದಿ ಮುಖ ತೋರಿಸಿ, ಮತ ಗಿಟ್ಟಿಸಿಕೊಳ್ಳಲು ಬಿಜೆಪಿ ತಂತ್ರ ಹೆಣೆದಿದೆ. ಹೀಗಾಗಿ ಈ ಬಾರಿ ಮೋದಿ ಅವರು ಹೆಚ್ಚಿನ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಅವರೊಂದಿಗೆ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಪ್ರಚಾರ ನಡೆಸಲಿದ್ದಾರೆ.

ಮೋದಿ ಏಪ್ರಿಲ್‌ 29 ರಿಂದ ಮೇ 7ರ ವರೆಗೆ ರಾಜ್ಯದ ಹಲವು ಭಾಗಗಳಲ್ಲಿ ರೋಡ್ ಶೋ ಹಾಗೂ ರ್ಯಾಲಿಗಳ ಮೂಲಕ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ಈ ಆರು ದಿನಗಳ ಅಂತರದಲ್ಲಿ 20 ಕ್ಕೂ ಹೆಚ್ಚು ರೋಡ್ ಶೋಗಳು, ಸಮಾವೇಶಗಳಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಪ್ರಭಾವ ಹೆಚ್ಚಿರುವ ಹಾಗೂ ಬಿಜೆಪಿ ಪ್ರಾಭಲ್ಯ ಕಡಿಮೆ ಇರುವ ಹಳೇ ಮೈಸೂರು ಭಾಗದಲ್ಲಿಯೂ ಮೋದಿ ಅವರು ಸಮಾವೇಶ ಆಯೋಜಿಸಲಾಗಿದೆ. ರಾಜ್ಯದ ಬೆಂಗಳೂರು ಬಿಟ್ಟರೆ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯಿಂದದ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪ್ರಾರಂಭಿಸಲಿದ್ದಾರೆ.

ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳು ಈ ರೀತಿ ಇವೆ…
ಏಪ್ರಿಲ್ 29 : ಹುಮ್ನಾಬಾದ್, ವಿಜಯಪುರ, ಕುಡಚಿ, ಬೆಂಗಳೂರು ಉತ್ತರ
ಏಪ್ರಿಲ್ 30: ಕೋಲಾರ, ಚನ್ನಪಟ್ಟಣ, ಬೇಲೂರು, ಮೈಸೂರು
ಮೇ 2: ಚಿತ್ರದುರ್ಗ, ವಿಜಯನಗರ, ಸಿಂಧನೂರು, ಕಲಬುರಗಿ
ಮೇ 3: ಮೂಡುಬಿದಿರೆ, ಹಾವೇರಿ, ಶಿವಮೊಗ್ಗ ಗ್ರಾಮಾಂತರ, ಬೆಂಗಳೂರು ಸೆಂಟ್ರಲ್
ಮೇ 6: ಚಿತ್ತಾಪುರ, ನಂಜನಗೂಡು, ತುಮಕೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ
ಮೇ 7: ಬಾದಾಮಿ, ಹಾವೇರಿ, ಶಿವಮೊಗ್ಗ ಗ್ರಾಮಾಂತರ, ಬೆಂಗಳೂರು ಕೇಂದ್ರ

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು