Kornersite

Bengaluru Entertainment Just In Karnataka Politics Sandalwood State

Kicha Sudeep: ಮೊಳಕಾಲ್ಮೂರಿನಲ್ಲಿ ಭರ್ಜರಿ ಪ್ರಚಾರ ಕೈಗೊಂಡ ಕಿಚ್ಚ ಸುದೀಪ್!

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ಪ್ರಚಾರ ಕೈಗೊಂಡಿವೆ. ಮತದಾರರನ್ನು ಸೆಳೆಯಲು ರಾಜಕೀಯ ನಾಯಕರು ಸಿನಿಮಾ ತಾರೆಯರನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅಲ್ಲದೇ, ರಾಷ್ಟ್ರೀಯ ಪಕ್ಷಗಳು ಕೇಂದ್ರ ನಾಯಕರನ್ನು ಆಹ್ವಾನಿ ಪ್ರಚಾರ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ನಟ ಕಿಚ್ಚ ಸುದೀಪ್ ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ.


ಮೊಳಕಾಲ್ಮೂರು ಪಟ್ಟಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸುದೀಪ್, ನಗರದ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಸಿದರು. ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ಪರವಾಗಿ ಮತ ಪ್ರಚಾರ ನೆಡೆಸುವಾಗ ಸುದೀಪ್ ನೋಡಲು ಸಾವಿರಾರು ಜನ ಅಭಿಮಾನಿಗಳು ಕಿಕ್ಕಿರಿದು ನೆರೆದಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ಅವರನ್ನು ಬೆಂಬಲಿಸಿ ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆಯೂ ನಟ ಸುದೀಪ್‌ ಜನರಿಗೆ ಮನವಿ ಮಾಡಿದರು.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು