Mysore : ರಾಜ್ಯ ವಿಧಾನಸಭೆ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ಪರ ಪ್ರಚಾರಕ್ಕೆ ಕಾರ್ನಾಟಕ (Karnataka) ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಮೈಸೂರು (Mysuru)ಗೆ ಆಗಮಿಸಿದ್ದಾರೆ. ನಗರದಲ್ಲಿನ ಪ್ರಸಿದ್ಧ ಮೈಲಾರಿ ದೋಸೆಯನ್ನು (Mailari Dosa) ಸವಿದು, ಸಂತಸ ವ್ಯಕ್ತಪಡಿಸಿಸಿದ್ದಾರೆ.
ಮೈಸೂರಿನ ಅಗ್ರಹಾರದ ಹತ್ತಿರ ಇರುವ ಪ್ರಸಿದ್ಧ ಮೈಲಾರಿ ಹೋಟೆಲ್ಗೆ (Mailari Hotel) ತೆರಳಿದ್ದ ಅವರು, ಅಡುಗೆ ಮನೆಯಲ್ಲಿ ಖುದ್ದು ತವಾ ಮೇಲೆ ದೋಸೆ ಹಾಕಿದ್ದಾರೆ. ತವಾಗೆ ಸಂಪಣ ಹಾಕಿ ದೋಸೆ ಮಾಡಿ ಸಂತೋಷ ವ್ಯಕ್ತಪಡಿಸಿದದ್ದಾರೆ. ನಂತರ ಅದರ ರುಚಿ ಸವಿದು ಸಂಭ್ರಮಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾನಿಲ್ಲಿ ಇಡ್ಲಿ, ದೋಸೆ ಸವಿದಿದ್ದೇನೆ. ಎಲ್ಲವೂ ತುಂಬಾ ರುಚಿಕರವಾಗಿತ್ತು. ಇದನ್ನು ಮನೆಯಲ್ಲಿ ಹೇಗೆ ಮಾಡಬೇಕು ಎಂಬುವುದನ್ನು ತಿಳಿದುಕೊಂಡಿದ್ದೇನೆ. ನಾನು ಇದನ್ನು ಮನೆಯಲ್ಲಿಯೂ ಟ್ರೈ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇದ್ದರು.