Kornersite

Just In National

Punjab CM: ಪಂಜಾಬ್ ನ ಮಾಜಿ ಸಿಎಂ ಶಿರೋಮಣಿ ಅಕಾಲಿದಳ ಸಂಸ್ಥಾಪಕ ಪ್ರಕಾಶ್ ಸಿಂಗ್ ಬಾದಲ್ ಇನ್ನಿಲ್ಲ!


ಪಂಜಾಬ್ ರಾಜ್ಯದ ಮಾಜಿ ಸಿಎಂ ಶಿರೋಮಣಿ ಅಕಾಲಿದಳದ (Shiromani Akali Dal) ಸಂಸ್ಥಾಪಕ ಪ್ರಕಾಶ್ ಸಿಂಗ್ ಬಾದಲ್ (Parkash Singh Badal) ನಿಧನರಾಗಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರಿಗೆ 95 ವರ್ಷ ವಯಸ್ಸಾಗಿತ್ತು. ಹೀಗಾಗಿ ಏಪ್ರಿಲ್ 21 ರಂದು ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಐದು ಬಾರಿ ಪಂಜಾಬ್ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಪ್ರಕಾಶ್ ಸಿಂಗ್ ಬಾದಲ್, ಕಳೆದ ವರ್ಷ ನಡೆದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಹಿರಿಯ ಅಭ್ಯರ್ಥಿಯಾಗಿದ್ದರು. ಅವರಿಗೆ ಕೊರೊನಾ ಕೂಡ ತಗುಲಿತ್ತು.

ಬಾದಲ್ ನೇತೃತ್ವದ ಶಿರೋಮಣಿ ಅಕಾಲಿದಳ ಪಂಜಾಬ್ ನಲ್ಲಿ ಎನ್ ಡಿಎ ಮಿತ್ರ ಪಕ್ಷವಾಗಿತ್ತು. 2020ರಲ್ಲಿ ಕೇಂದ್ರ ಸರ್ಕಾರ ಮೂರು ಕೃಷಿ ಮಸೂದೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಿದ್ದಾಗ ಅದನ್ನು ಪ್ರತಿಭಟಿಸಿ ಎನ್ ಡಿಎ ಮೈತ್ರಿಕೂಟದಿಂದ ಹೊರಗೆ ಬಂದಿತ್ತು.
ಬಾದಲ್ ಅವರು ರಾಜಕೀಯ ಇತಿಹಾಸದಲ್ಲಿ ಹಲವು ದಾಖಲೆಗಳನ್ನೇ ಸೃಷ್ಟಿಸಿದ್ದಾರೆ. 1952ರಲ್ಲಿ ಕಿರಿಯ ಸರಪಂಚ್ ಆಗಿ ಅವರು ಆಯ್ಕೆಯಾಗಿದ್ದರು. ಆಗ ಬಾದಲ್ ಗ್ರಾಮದಿಂದ ಚುನಾಯಿತರಾಗಿದ್ದರು. 1970ರಲ್ಲಿ ರಾಜ್ಯದ ಅತ್ಯಂತ ಕಿರಿಯ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿದ್ದರು. ಆ ಸಂದರ್ಭದಲ್ಲಿ ಅವರಿಗೆ ಕೇವಲ 43 ವರ್ಷ ವಯಸ್ಸಾಗಿತ್ತು. 2012ರಲ್ಲಿ ಮುಖ್ಯಮಂತ್ರಿಯಾದಾಗ ಪಂಜಾಬ್ನ ಅತ್ಯಂತ ಹಿರಿಯ ಮುಖ್ಯಮಂತ್ರಿ ಎಂಬ ದಾಖಲೆ ಕೂಡ ಅವರ ಹೆಸರಿನಲ್ಲಿಯೇ ಇದೆ. ಆಗ ಅವರಿಗೆ 85 ವರ್ಷ ವಯಸ್ಸಾಗಿತ್ತು.

You may also like

National

ರಾಮಲೀಲಾ ಮೈದಾನದಲ್ಲಿ ಜಮಾಯಿಸುತ್ತಿರುವ ರೈತರು

ನವದೆಹಲಿ : ದೇಶದ ಬೇರೆ ಬೇರೆ ರಾಜ್ಯಗಳಿಂದ ರೈತರು ಇಂದು ದೆಹಲಿಯಲ್ಲಿ ಜಮಾಯಿಸುತ್ತಿದ್ದಾರೆ. ವಿವಿಧ ರೈತ ಸಂಘಟನೆಗಳ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೃಷಿ ಉತ್ಪನ್ನಗಳ ಕನಿಷ್ಠ
Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ