ಬೆಂಗಳೂರು: ಕುಡಿತದ ಚಟದ ದಾಸನಾಗಿದ್ದ ಮಗ, ತಂದೆಯ ಬಳಿ ಹಣ ಕೇಳಿದ್ದಾನೆ. ತಂದೆ ಹಣ ನೀಡಿದ್ದಕ್ಕೆ ಪಾಪಿ ಮಗ ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ನಗರದ ಗೋವಿಂದರಾಜನಗರ ಠಾಣೆ ವ್ಯಾಪ್ತಿಯಲ್ಲಿನ ಮಾರೇನಹಳ್ಳಿ ಪಿ. ಎಸ್ ಲೇಔಟ್ನಲ್ಲಿ ಬೆಳಕಿಗೆ ಬಂದಿದೆ. ಸೆಕ್ಯೂರಿಟಿಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಬಸವರಾಜು(60) ಕೊಲೆಯಾದ ದುರ್ದೈವಿ. ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಪುತ್ರ ನೀಲಧರ್ ಎಂಬಾತನೇ ಕೊಲೆ ಮಾಡಿರುವ ಪಾಪಿ ಮಗ. ಇಬ್ಬರು ಕೂಡ ಶೆಡ್ ವೊಂದರಲ್ಲಿ ವಾಸವಾಗಿತ್ತು. ಈ ಸಂದರ್ಭದಲ್ಲಿ ಮಗ ಕುಡಿಯಲು ಹಣ ಕೇಳಿದ್ದಾನೆ. ಕೊಡದಿರುವುದಕ್ಕೆ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ.
ಕೊಲೆಯಾಗಿ 15 ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡ ಪೊಲೀಸರಿಗೆ ಮಗನಿಂದಲೇ ತಂದೆ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.