Kornersite

Just In Sports

IPL 2023: ಸತತ ಸೋಲಿನಿಂದ ಕಂಗೆಟ್ಟಿರುವ ಹೈದರಾಬಾದ್ ಗೆ ಮತ್ತೊಂದು ಬರೆ!

Mumbai : ಸತತ ಸೋಲಿನಿಂದ ಕಂಗೆಟ್ಟಿರುವ ಹೈದರಾಬಾದ್ ತಂಡಕ್ಕೆ ಮತ್ತೊಂದು ತಲೆನೋವು ಶುರುವಾಗಿದೆ. ಪ್ಲೇ ಆಫ್‌ ಹಾದಿ ಕಠಿಣವಾಗಿಸಿಕೊಂಡಿರುವ ಸನ್‌ ರೈಸರ್ಸ್‌ ಹೈದರಾಬಾದ್‌ (SRH) ತಂಡದ ಸ್ಟಾರ್‌ ಆಲ್‌ ರೌಂಡರ್‌ ಆಟಗಾರ ವಾಷಿಂಗ್ಟನ್‌ ಸುಂದರ್‌ (Washington Sundar) ಟೂರ್ನಿಯಿಂದ ಹೊರಗೆ ಉಳಿದಿದ್ದಾರೆ.

ಈ ಕುರಿತು ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಹೈದರಾಬಾದ್‌ ತಂಡ ಹೇಳಿಕೊಂಡಿದೆ. ಮಂಡಿರಜ್ಜು ಗಾಯದಿಂದಾಗಿ ವಾಷಿಂಗ್ಟನ್‌ ಸುಂದರ್‌ ಅವರು 2023ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಅಲ್ಲದೇ, ಆದಷ್ಟು ಬೇಗ ಗುಣಮುಖರಾಗಿ ವಾಷಿ ಎಂದು ಹಾರೈಸಿದೆ.

ಈ ಐಪಿಎಲ್ ನಲ್ಲಿ ವಾಷಿಂಗ್ಟನ್‌ ಸುಂದರ್‌ ಅಷ್ಟೊಂದು ಹೇಳಿಕೊಳ್ಳುವಂತಹ ಫಾರ್ಮ್ ಮುಂದುವರೆಸಿಲ್ಲ. ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ ಕೊನೆಯ ಪಂದ್ಯದಲ್ಲಿ ಬೌಲಿಂಗ್‌ ಮಾಡಿದ್ದ 4 ಓವರ್‌ ಗಳಿಗೆ 28 ರನ್‌ ನೀಡಿದ್ದ ವಾಷಿಂಗ್ಟನ್‌, ಬ್ಯಾಟಿಂಗ್‌ನಲ್ಲಿ 15 ಎಸೆತಗಳಲ್ಲಿ 24 ರನ್‌ ಗಳನ್ನು ಸಿಡಿಸಿದ್ದರು. ಇದರ ಹೊರತಾಗಿ ಈ ಪಂದ್ಯವನ್ನು ಹೈದರಾಬಾದ್ ಸೋತಿತ್ತು.

ಈ ಆವೃತ್ತಿಯಲ್ಲಿ 7 ಪಂದ್ಯಗಳಲ್ಲಿ ವಾಷಿಂಗ್ಟನ್‌ ಸುಂದರ್‌ 60 ರನ್‌ ಗಳಿಸಿ, ಕೇವಲ 3 ವಿಕೆಟ್‌ ಪಡೆದಿದ್ದಾರೆ. ಚೆನ್ನೈ ಸೂಪರ್‌ ಕಿಂಗ್ಸ್ ವಿರುದ್ಧದ ಸೋಲಿನ ಬಳಿಕ ಮಾತನಾಡಿದ್ದ ಬ್ರಿಯಾನ್‌ ಲಾರಾ, ವಾಷಿಂಗ್ಟನ್‌ ಸುಂದರ್‌ ಅದ್ಭುತ ಆಲ್‌ರೌಂಡರ್‌ ಆಗಬೇಕೆಂದು ಫ್ರಾಂಚೈಸಿ ಬಯಸುತ್ತಿದೆ ಎಂದು ಭರವಸೆ ವ್ಯಕ್ತಪಡಿಸಿದ್ದರು.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Sports

ಮಾಜಿ ಕ್ರಿಕೆಟಿಗ ಸಲೀಂ ದುರಾನಿ ಇನ್ನಿಲ್ಲ!

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ಆಲ್ ರೌಂಡರ್ ಆಟಗಾರ ಸಲೀಂ ದುರಾನಿ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.1960ರ ದಶಕದಲ್ಲಿ ಭಾರತದ ಆಲ್ ರೌಂಡರ್