Kornersite

Bengaluru Just In Karnataka Politics State

Karnataka Assembly Election: ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯೋ, ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ!!

Belagavi : ಸೂರ್ಯ, ಚಂದ್ರರು ಇರುವುದು ಎಷ್ಟೋ ಸತ್ಯವೋ ರಾಜ್ಯದಲ್ಲಿ ಬಿಜೆಪಿ ಪಕ್ಷವು 130ರಿಂದ 135 ಕ್ಷೇತ್ರಗಳನ್ನು ಗೆದ್ದು ಸರ್ಕಾರ ರಚನೆ ಮಾಡುವುದು ಶತಸಿದ್ಧ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (B.S.Yediyurappa) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ (Belagavi) ಉತ್ತರ ಕ್ಷೇತ್ರದಲ್ಲಿ ಬಿಜೆಪಿ (BJP) ಚುನಾವಣಾ (Election) ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಹಣಬಲ, ತೋಳ್ಬಲ ಹಾಗೂ ಜಾತಿಯ ವಿಷಬೀಜ ಬಿತ್ತಿ ಚುನಾವಣೆ ಗೆಲ್ಲುತ್ತಿದ್ದರು. ಜನರು ಜಾಗೃತರಾಗಿದ್ದಾರೆ. ಹೀಗಾಗಿ ಬಿಜೆಪಿ ಪರ ಮತ ಚಲಾಯಿಸಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.

ಡಾ.ರವಿ ಪಾಟೀಲ್ (Dr.Ravi Patil) ಗೆಲ್ಲುವ ಜವಾಬ್ದಾರಿ ಅನಿಲ್ ಬೆನಕೆ (Anil Benake) ಮೇಲಿದೆ. ಪ್ರಧಾನಿ ಮೋದಿ ಅವರು ದೇಶ- ವಿದೇಶದಲ್ಲಿ ಬಿಡುವಿಲ್ಲದೆ ಸುತ್ತಾಡಿದರೂ ಒಂದು ದಿನ ವಿಶ್ರಾಂತಿ ಪಡೆದಿಲ್ಲ. ತಾವೆಲ್ಲರೂ ಇಂದು ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ಕೇಳಿದ್ದೀರಿ. ಅದರಲ್ಲಿ ಮೋದಿ ದೇಶದ ಪ್ರಚಲಿತ ರಾಜಕೀಯದ ಬಗ್ಗೆ ಮಾತನಾಡಿದ್ದಾರೆ. ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡಲು ಏನೇನು ಮಾಡಬೇಕು ಎಂದು ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ (Congress) ಪಕ್ಷ ಮುಳುಗುತ್ತಿರುವ ಹಡಗು. ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಉತ್ತರ ಪ್ರದೇಶದ (Uttar Pradesh) ಚುನಾವಣೆಯಲ್ಲಿ 400 ಸೀಟ್‌ಗಳಲ್ಲಿ ಕೇವಲ 4 ಸೀಟ್ ಗೆದ್ದಿತು. ರಾಜ್ಯದಲ್ಲಿ ಕೂಡ ಇದೇ ಪರಿಸ್ಥಿತಿ ಬರಲಿದೆ ಎಂದು ವ್ಯಂಗ್ಯವಾಡಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು