Kornersite

Bengaluru Just In Karnataka Politics State

Karnataka Assembly Election: ವರುಣಾ ಕ್ಷೇತ್ರದಲ್ಲಿ ಸಿದ್ದು ಪರ ಸೊಸೆ ಬ್ಯಾಟಿಂಗ್!

Mysore : ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah)ಅವರು ಸ್ಪರ್ಧಿಸಿರುವ ವರುಣಾ ಕ್ಷೇತ್ರದಲ್ಲಿ (Varuna Constituency) ಅವರ ಸೊಸೆ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಸೊಸೆ ಸ್ಮಿತಾ ರಾಕೇಶ್‌ ಸಿದ್ದರಾಮಯ್ಯ (Smita Rakesh Siddaramaiah) ಅವರು, ಮನೆ ಮನೆಗೆ ತೆರಳಿ ಮತ ಯಾಚಿಸಿದ್ದಾರೆ. ಈ ಸಂದರ್ಭದಲ್ಲಿ ಅತೀ ಹೆಚ್ಚು ಮತಗಳಿಂದ ಮಾವನವರನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಪರ ನಟಿ ರಮ್ಯಾ (Ramya) ಹಾಗೂ ನಟ ದುನಿಯಾ ವಿಜಯ್‌ (Duniya Vijay) ವರುಣಾ ಕ್ಷೇತ್ರದಲ್ಲಿ ಪ್ರಚಾರ ನಡೆಸುವುದಾಗಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಇದರ ಮಧ್ಯೆ ತಾವೂ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದು, ಅತ್ಯಧಿಕ ಮತಗಳಿಂದ ಸಿದ್ದರಾಮಯ್ಯ ಅವರು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯವರಿಗೆ ನನ್ನ ತಂದೆ ಕೊಟ್ಟ ಆಡಳಿತದಲ್ಲಿ ತಪ್ಪು ಹುಡುಕಲಾಗುತ್ತಿಲ್ಲ. ಅವರ ಪ್ರಾಮಾಣಿಕತೆ ಬಗ್ಗೆ ಪ್ರಶ್ನೆ ಮಾಡಲು ಅವರಿಗೆ ಆಗುತ್ತಿಲ್ಲ. ಹೀಗಾಗಿ ಜಾತಿ ವಿರೋಧಿ ಹಣೆಪಟ್ಟಿ ಕಟ್ಟುವ ಪ್ರಯತ್ನ ಮಾಡ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಲಿಂಗಾಯತ ವಿರೋಧಿ ಪಟ್ಟ ಕಟ್ಟುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಆದರೆ, ಇದರಲ್ಲಿ ನಮ್ಮ ತಂದೆ ಯಶಸ್ವಿಯಾಗುತ್ತಾರೆ ಎಂದು ಹೇಳಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು