Kornersite

Just In National

PUC Result: ಪಿಯುಸಿ ಪಾಸಾದ ಇಬ್ಬರು ಶಾಸಕರು!

Lucknow : ಕಲಿಯುವುದಕ್ಕೆ ಯಾವುದೇ ವಯಸ್ಸಿನ ನಿರ್ಬಂಧವಿಲ್ಲ. ಇದಕ್ಕೆ ಯಾವುದೇ ವಯಸ್ಸು ಕೂಡ ಅಡ್ಡಿ ಬರುವುದಿಲ್ಲ. ಯಾರು ಯಾವಾಗ ಬೇಕಾದರೂ ಕಲಿಯಬಹುದು. ಹೀಗೆ ಇಬ್ಬರು ಶಾಸಕರು, ಶಾಸಕರಾದ ನಂತರ ಅದೂ 50ರ ಹರೆಯದಲ್ಲಿ ಪಿಯುಸಿ ಪಾಸ್ ಮಾಡಿದ್ದಾರೆ. ಅಲ್ಲದೇ, ಅವರಿಬ್ಬರೂ ಪದವಿ ಓದುವ ಗುರಿ ಹೊಂದಿದ್ದಾರೆ.

ಬರೇಲಿ ಜಿಲ್ಲೆಯ ಬಿತ್ರಿ-ಚೈನ್‌ಪುರ ಕ್ಷೇತ್ರದ ಮಾಜಿ ಶಾಸಕ ರಾಜೇಶ್ ಮಿಶ್ರಾ 500ಕ್ಕೆ 263 ಅಂಕಗಳನ್ನು ಪಡೆದರೆ, ಹಸ್ತಿನಾಪುರದಿಂದ ಎರಡು ಬಾರಿ ಶಾಸಕರಾಗಿದ್ದ ಪ್ರಭುದಯಾಳ್ ವಾಲ್ಮೀಕಿ ಕೂಡ ಪಾಸಾಗಿದ್ದಾರೆ. ಉತ್ತರ ಪ್ರದೇಶ ಬಿಜೆಪಿಯ ಮಾಜಿ ಶಾಸಕ ರಾಜೇಶ್ ಮಿಶ್ರಾ ಅವರು 55ನೇ ವಯಸ್ಸಿನಲ್ಲಿ 12ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ 500ರಲ್ಲಿ 263 ಅಂಕಗಳನ್ನು ಗಳಿಸುವ ಮೂಲಕ ಪಾಸಾಗಿದ್ದಾರೆ. 2017 ರಿಂದ 2022 ರ ವರೆಗೆ ಅಸೆಂಬ್ಲಿಯಲ್ಲಿ ಬರೇಲಿ ಜಿಲ್ಲೆಯ ಬಿತ್ರಿ-ಚೈನ್ಪುರ್ ಪ್ರತಿನಿಧಿಸಿದ್ದ ಮಿಶ್ರಾ, ಈಗ ಬಡವರಿಗೆ ಸಹಾಯ ಮಾಡಲು ಕಾನೂನಿನಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಯೋಜಿಸಿದ್ದಾರೆ. ಈ ಹಿನ್ನೆಲೆಯಲ್ಲಿ 12ನೇ ತರಗತಿಯ ಪರೀಕ್ಷೆ ಬರೆದು ಪಾಸ್ ಮಾಡಿದ್ದಾರೆ.

ಸದ್ಯ 12ನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದ್ದು, ಹಿಂದಿಯಲ್ಲಿ 57, ಸಿವಿಕ್ಸ್‌ ನಲ್ಲಿ 47, ಶಿಕ್ಷಣದಲ್ಲಿ 42, ಡ್ರಾಯಿಂಗ್‌ ನಲ್ಲಿ 36 ಮತ್ತು ಸಮಾಜಶಾಸ್ತ್ರದಲ್ಲಿ 81 ಅಂಕಗಳನ್ನು ಪಡೆಯುವ ಮೂಲಕ ತೇರ್ಗಡೆಗೊಂಡಿದ್ದಾರೆ. ಈ ಕುರಿತು ಮಾತನಾಡಿರುವ ಬಿಜೆಪಿಯ ಮಾಜಿ ಶಾಸಕ , ಡ್ರಾಯಿಂಗ್, ಸಿವಿಕ್ಸ್ ಮತ್ತು ಶಿಕ್ಷಣದಲ್ಲಿ ನಾನು ಪಡೆದ ಅಂಕಗಳಿಂದ ತೃಪ್ತಿ ಹೊಂದಿಲ್ಲ. ನಾನು ಉತ್ತರ ಪತ್ರಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತೇನೆ ಎಂದು ಹೇಳಿದ್ದಾರೆ. ಎರಡು ವರ್ಷಗಳ ಹಿಂದೆ, ನಾನು 10ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ತೇರ್ಗಡೆ ಹೊಂದಿದ್ದೇನೆ. ಈಗ ನಾನು 12ನೇ ತರಗತಿ ಪರೀಕ್ಷೆಯಲ್ಲಿಯೂ ಉತ್ತೀರ್ಣನಾಗಿದ್ದೇನೆ. ಎಲ್‌ ಎಲ್‌ ಬಿ ಮುಂದುವರಿಸಲು ಬಯಸುತ್ತೇನೆ. ಇದರಿಂದ ಬಡವರಿಗೆ ನ್ಯಾಯ ಪಡೆಯಲು ನಾನು ಸಹಾಯ ಮಾಡುತ್ತೇನೆ ಎಂದು ಹೇಳಿದ್ದಾರೆ.

ನಾನು ಶಾಸಕನಾಗಿದ್ದಾಗ, ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗದ ಜನರು ಉತ್ತಮ ವಕೀಲರ ಸೇವೆಯನ್ನು ಪಡೆಯಲು ಸಾಧ್ಯವಾಗದ್ದನ್ನು ಗಮನಿಸಿದ್ದೆ. ಇದರಿಂದಾಗಿ ಅವರಿಗೆ ನ್ಯಾಯ ಸಿಗುವುದಿಲ್ಲ ಎಂದು ನಾನು ಅರಿತುಕೊಂಡೆ. ಈ ಹಿನ್ನೆಲೆಯಲ್ಲಿ ನಾನು ವಕೀಲನಾಗುತ್ತೇನೆ ಎಂದ ಅವರು, ಬೋರ್ಡ್ ಪರೀಕ್ಷೆಗಳಲ್ಲಿ ಯಾವುದೇ ನಕಲು ನಡೆದಿಲ್ಲ ಮತ್ತು ತಪಾಸಣೆ ಕಟ್ಟುನಿಟ್ಟಾಗಿದೆ ಎಂದು ಹೇಳಿದ್ದಾರೆ.

You may also like

National

ರಾಮಲೀಲಾ ಮೈದಾನದಲ್ಲಿ ಜಮಾಯಿಸುತ್ತಿರುವ ರೈತರು

ನವದೆಹಲಿ : ದೇಶದ ಬೇರೆ ಬೇರೆ ರಾಜ್ಯಗಳಿಂದ ರೈತರು ಇಂದು ದೆಹಲಿಯಲ್ಲಿ ಜಮಾಯಿಸುತ್ತಿದ್ದಾರೆ. ವಿವಿಧ ರೈತ ಸಂಘಟನೆಗಳ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೃಷಿ ಉತ್ಪನ್ನಗಳ ಕನಿಷ್ಠ
Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ