Kornersite

Crime Just In National

Crime News: ಜನನಿಬಿಡ ಪ್ರದೇಶದಲ್ಲಿಯೇ ಬಿಜೆಪಿ ಮುಖಂಡನ ಹತ್ಯೆ!

ನಡು ರಸ್ತೆಯಲ್ಲಿಯೇ ಬಿಜೆಪಿ(BJP) ಮುಖಂಡನನ್ನು ಹತ್ಯೆ ಮಾಡಲಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ತೆರಳುತ್ತಿರುವಾಗ ನಡುರಸ್ತೆಯಲ್ಲಿ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರಿನ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮೃತರನ್ನು ಪಿಪಿಜಿ ಶಂಕರ್ ಎಂದು ಗುರುತಿಸಲಾಗಿದೆ. ಅವರು ಪೆರಂಬೂರು ಪಕ್ಕದ ವಲರಪುರಂ ಪಂಚಾಯತ್ ಅಧ್ಯಕ್ಷರಾಗಿದ್ದರು. ತಮಿಳುನಾಡು ಬಿಜೆಪಿಯ ಎಸ್‌ಸಿ-ಎಸ್‌ಟಿ ವಿಭಾಗದ ರಾಜ್ಯ ಖಜಾಂಚಿಯೂ ಆಗಿದ್ದರು.


ಪೂನಮಲ್ಲೆ ಹೆದ್ದಾರಿಯ ನಸರತ್‌ಪೇಟೆ ಸಿಗ್ನಲ್‌ ಹತ್ತಿರ ಕಾರು ಬಂದಾಗ ಏಕಾಏಕಿ ಶಂಕರ್‌ ಅವರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರಿನ ಮೇಲೆ ಕಂಟ್ರಿ ಬಾಂಬ್‌ ಎಸೆದಿದ್ದಾರೆ. ಇದರಿಂದಾಗಿ ಗಾಬರಿಗೊಂಡ ಶಂಕರ್ ಕಾರು ನಿಲ್ಲಿಸಿ ಓಡಿ ಹೋಗಿದ್ದಾರೆ. ಆದರೆ, ಗ್ಯಾಂಗ್ ಆತನನ್ನು ಹಿಂಬಾಲಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಶಂಕರ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.


ಮಾಹಿತಿ ಪಡೆದ ನಸರತ್‌ಪೇಟ್ ಪೊಲೀಸರು ಸ್ಥಳಕ್ಕೆ ಧಾವಿಸಿ ಶಂಕರ್ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಚೆನ್ನೈನ ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಆರೋಪವನ್ನು ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಶಂಕರ್ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ 15ಕ್ಕೂ ಹೆಚ್ಚು ಪ್ರಕರಣಗಳಿವೆ ಎಂದು ಪೊಲೀಸ್ ಮೂಲಗಳು ಕೂಡ ಹೇಳಿವೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ