Tumakuru : ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಗುಂಪಿನಲ್ಲಿದ್ದ ದುಷ್ಕರ್ಮಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ (G Parameshwara) ಅವರ ಮೇಲೆ ಕಲ್ಲು ಎಸೆದಿರುವ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ ನಡೆದಿದೆ.
ಪ್ರಚಾರದ ಸಂದರ್ಭದಲ್ಲಿ ಜಿ. ಪರಮೇಶ್ವರ್ ಅವರಿಗೆ ಬೃಹತ್ ಹಾರ ಹಾಕಿ ಅವರನ್ನು ಎತ್ತಿಕೊಂಡು ಕಾರ್ಯಕರ್ತರು ಕುಣಿಯುತ್ತಿದ್ದರು. ಈ ಸಂದರ್ಭದಲ್ಲಿ ಗುಂಪಿನಲ್ಲಿದ್ದ ದುಷ್ಕರ್ಮಿಯಿಂದ ಪರಮೇಶ್ವರ್ ಮೇಲೆ ಕಲ್ಲೆಸೆಯಲಾಗಿದೆ ಎಂದು ತಿಳಿದು ಬಂದಿದೆ.
ಜಿ. ಪರಮೇಶ್ವರ್ ಅವರನ್ನು ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ತುಮಕೂರಿನ ಸಿದ್ದಾರ್ಥ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.