Bangalore : ಮಾಜಿ ಸಿಎಂ ಎಸ್. ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ (Shivaraj Kumar) ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivaraj Kumar) ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಗೀತಾ ಅವರಿಗೆ ಶಾಲು ಹಾಕಿ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ನಟ ಶಿವರಾಜ್ ಕುಮಾರ್ ಸಹ ಗೀತಾ ಜೊತೆ ಪ್ರಚಾರಕ್ಕೆ ಹೋಗುವುದಾಗಿ ಹೇಳಿದ್ದಾರೆ. ಇದರಿಂದ ಕಾಂಗ್ರೆಸ್ಗೆ ತಾರಾಬಲ ಬಂದಂತಾಗಿದೆ.

ನಮ್ಮ ಗಾಳಕ್ಕೆ ಮಧು ಬಂಗಾರಪ್ಪ ಬಿದ್ದರು. ಇದೀಗ ಗೀತಾ ಶಿವರಾಜ್ ಕುಮಾರ್ ದೊಡ್ಡ ಬಲೆ ಬಿದ್ದಿದ್ದಾರೆ. ರಾಹುಲ್ ಗಾಂಧಿಯವರ ಕಾರ್ಯಕ್ರಮದ ಬಲೆಗೆ ಗೀತಾ ಶಿವರಾಜ್ ಕುಮಾರ್ ಬಿದ್ದಿದ್ದಾರೆ. ನನ್ನ ನಾಯಕ ಬಂಗಾರಪ್ಪ ಪುತ್ರಿ ಇವರು, ರಾಜ್ ಕುಮಾರ್ ಸೊಸೆ. ಇಡೀ ಕಾಂಗ್ರೆಸ್ ಪಕ್ಷದ ಪರವಾಗಿ ಗೀತಾ ಶಿವರಾಜ್ ಕುಮಾರ್ಗೆ ಸ್ವಾಗತ ಎಂದು ಡಿಕೆಶಿ ಹೇಳಿದರು.

ಗೀತಾ ಶಿವರಾಜ್ ಕುಮಾರ್ ಅವರ ಕಿರಿಯ ಸಹೋದರ ಮಧು ಬಂಗಾರಪ್ಪ (Madhu Bangarappa) ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದಾರೆ. ಸಹೋದರ ಕುಮಾರ್ ಬಂಗಾರಪ್ಪ (Kumar Bangarappa) ಅವರ ವಿರುದ್ಧವೇ ಸೊರಬ (Soraba) ಕ್ಷೇತ್ರದಲ್ಲಿ ಕಣಕ್ಕೆ ಇಳಿದಿದ್ದಾರೆ. ಸದ್ಯ ಕಿರಿಯ ಸಹೋದರನ ಪರ ಗೀತಾ ಅವರು ಪ್ರಚಾರ ನಡೆಸಲಿದ್ದಾರೆ. ಅಲ್ಲದೇ, ಶಿರಸಿಯಲ್ಲಿ ಭೀಮಣ್ಣ ನಾಯ್ಕ ಪರ ಮಾತ್ರ ಪ್ರಚಾರ ಮಾಡಲಿದ್ದಾರೆ.

