Bangalore : ರಾಜ್ಯದಲ್ಲಿ ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ 80 ವರ್ಷ ಮೇಲ್ಪಟ್ಟವರು, ಅಂಗವಿಕಲರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಈ ಬಾರಿ ನೀಡಲಾಗಿತ್ತು. ಹೀಗಾಗಿ ಚುನಾವಣಾ ಆಯೋಗವು (Election Commission)ದ ವೇಳಾಪಟ್ಟಿಯಂತೆ ಶನಿವಾರದಿಂದ ಬ್ಯಾಲೆಟ್ ಪೇಪರ್ ವೋಟಿಂಗ್ (Ballot Paper Voting) ನಡೆಯಲಿದೆ.
ಏ. 29ರಿಂದ ಮೇ 6ರ ವರೆಗೆ ಬ್ಯಾಲೆಟ್ ಪೇಪರ್ ವೋಟಿಂಗ್ ನಡೆಯಲಿದ್ದು, 80 ವರ್ಷ ಮೇಲ್ಪಟ್ಟವರು, ಅಂಗವಿಕಲರು ಹಾಗೂ ವಿಕಲಚೇತನರಿಗೆ ಚುನಾವಣಾ ಸಿಬ್ಬಂದಿಗಳು ಬ್ಯಾಲೆಟ್ ಪೇಪರ್ ನೀಡುವ ಮೂಲಕ ಮತದಾನ ಪ್ರಕ್ರಿಯೆಯನ್ನು ನಡೆಸಲಿದ್ದಾರೆ. ರಾಜ್ಯದಲ್ಲಿ ಒಟ್ಟು 12.15 ಲಕ್ಷ ಜನ 80 ವರ್ಷ ಮೇಲ್ಪಟ್ಟ ಮತದಾರರಿದ್ದು, ಮನೆಯಿಂದಲೇ ಮತದಾನ ಮಾಡಲಿದ್ದಾರೆ.
ಬೆಂಗಳೂರಿನಲ್ಲಿ (Bengaluru) 2 ಲಕ್ಷಕ್ಕೂ ಅಧಿಕ ಜನ 80 ವರ್ಷ ಮೇಲ್ಪಟ್ಟವರಿದ್ದಾರೆ. ಅದರಲ್ಲಿ 9,152 ಜನ ಮತದಾರರು ಮನೆಯಿಂದಲೇ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಬೆಂಗಳೂರು ಕೇಂದ್ರದಲ್ಲಿ 1,995, ಬೆಂಗಳೂರು ಉತ್ತರ- 2,298, ಬೆಂಗಳೂರು ದಕ್ಷಿಣ- 2,530, ಬೆಂಗಳೂರು ಗ್ರಾಮಾಂತರದಲ್ಲಿ – 2,329 ಮತದಾರರು ಇದ್ದಾರೆ.