Kornersite

Bengaluru Just In Karnataka Politics State

Karnataka Assembly Election: ಪ್ರಚಾರದ ವೇಳೆ ಕುಸಿದು ಬಿದ್ದ ಸಿದ್ದರಾಮಯ್ಯ!

Ballari : ವಿಧಾನಸಭಾ ಚುನಾವಣೆ (Karnataka Election 2023)ಯ ಸಂದರ್ಭದಲ್ಲಿ ಹೆಲಿಕಾಪ್ಟರ್ ಮೂಲಕ ಕೂಡ್ಲಿಗಿಗೆ ಆಗಮಿಸಿದ ಸಿದ್ದರಾಮಯ್ಯ (Siddaramaiah) ಕಾರು ಹತ್ತುತ್ತಿದ್ದಂತೆ ಕುಸಿದು ಬಿದ್ದಿರುವ ಘಟನೆ ನಡೆದಿದೆ.

ಕುಡ್ಲಿಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್.ಟಿ ಶ್ರೀನಿವಾಸ್ ಪರ ಪ್ರಚಾರ ನಡೆಸಲು ತೆರಳಿದ್ದರು. ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದ ಅವರು, ಬಳಿಕ ಮೊಬೈಲ್‌ನಲ್ಲಿ ಬ್ಯೂಸಿಯಾಗಿದ್ದರು. ಕೆಲವೇ ಕ್ಷಣಗಳಲ್ಲಿಯೇ ಕಾರು ಹತ್ತುತ್ತಿದ್ದಂತೆ ಕಾರಿನ ಬಾಗಲ ಬಲಿ ಕುಸಿದು ಬಿದ್ದಿದ್ದಾರೆ.
ಸಿದ್ದರಾಮಯ್ಯ ಅವರು ಕುಸಿದು ಬೀಳುತ್ತಿದ್ದಂತೆ ಹಿಡಿದುಕೊಂಡ ವೈದ್ಯರು, ಬಳಿಕ ಕಾರಿನೊಳಗೆ ಕೂರಿಸಿ ಗ್ಲೂಕೋಸ್ ನೀಡಿದ್ದಾರೆ. ಗ್ಲೂಕೋಸ್ ಕುಡಿದ ಬಳಿಕ ಚೇತರಿಸಿಕೊಂಡ ಸಿದ್ದರಾಮಯ್ಯ ಜನರತ್ತ ಕೈ ಬೀಸಿ ಕಾರ್ಯಕ್ರಮಕ್ಕೆ ತೆರಳಲು ಸಿದ್ಧರಾದರು. ನಂತರ ಅಭ್ಯರ್ಥಿ ಎನ್.ಟಿ ಶ್ರೀನಿವಾಸ್ ಮನೆಗೆ ತೆರಳಿ ಶುಭ ಹಾರೈಸಿದರು.

ಇದೇ ತಮ್ಮ ಕೊನೆಯ ಚುನಾವಣೆ ಎಂದು ಘೋಷಿಸಿರುವ ಸಿದ್ದರಾಮಯ್ಯ, ಕಳೆದ ಕೆಲವು ದಿನಗಳಿಂದ ಚುನಾವಣಾ ಪ್ರಚಾರದಲ್ಲಿ ಬಿಡುವಿಲ್ಲದೇ ಕೆಲಸ ಮಾಡುತ್ತಿದ್ದಾರೆ. ವರುಣಾ ಕ್ಷೇತ್ರದಲ್ಲಿ ಎರಡು ದಿನ ಮಾತ್ರ ಪ್ರಚಾರ ಕೈಗೊಳ್ಳುವುದಾಗಿ ಹೇಳಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಪ್ರಚಾರ ಬಿರುಸು ಮಾಡಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು