Kornersite

Crime International Just In

Crime News: ಫೈರಿಂಗ್ ಮಾಡಿ ಬಾಲಕ ಸೇರಿದಂತೆ ಐವರ ಹತ್ಯೆ!

ಗುಂಡಿನ ದಾಳಿ ನಡೆದ ಪರಿಣಾಮ ಬಾಲಕ ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಅಮೆರಿಕ(America)ದ ಟೆಕ್ಸಾಸ್ ನಲ್ಲಿ ನಡೆದಿದೆ.


ಟೆಕ್ಸಾಸ್‌ ನ ಕ್ಲೀವ್‌ ಲ್ಯಾಂಡ್‌ ನಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ರಾತ್ರಿ ಹೊತ್ತು ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ. ಹೀಗಾಗಿ ಪಕ್ಕದ ಮನೆಯವರು ಈ ಶಬ್ದದಿಂದ ಮನೆಯಲ್ಲಿ ಮಕ್ಕಳು ಮಲಗಲು ಕಷ್ಟವಾಗುತ್ತಿದೆ. ಹೀಗಾಗಿ ಗುಂಡು ಹಾರಿಸುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ. ಇದಕ್ಕೆ ಕೋಪಗೊಂಡ ಪಾಪಿ, ಬಾಲಕ ಸೇರಿ ಮನೆಯ ಐವರನ್ನು ಹತ್ಯೆ ಮಾಡಿದ್ದಾನೆ.

ಆ ವ್ಯಕ್ತಿ ಮದ್ಯ ಸೇವಿಸಿದ್ದ ಎನ್ನಲಾಗಿದೆ. ಸಂತ್ರಸ್ತರ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಶಂಕಿತ ತನ್ನ ರೈಫಲ್‌ನೊಂದಿಗೆ ಬರುತ್ತಿರುವುದು ಸೆರೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮನೆಯಲ್ಲಿ 10 ಜನರಿದ್ದರು, ಮೃತರಲ್ಲಿ ಮೂವರು ಮಹಿಳೆಯರು ಹಾಗೂ ಓರ್ವ ಪುರುಷ ಸೇರಿದ್ದಾರೆ. ಮೃತರು 8 ರಿಂದ 40 ರ ವಯಸ್ಸಿನವರು ಎಂದು ಗುರುತಿಸಲಾಗಿದೆ.

ಅಮೆರಿಕದ ಹಲವು ನಗರಗಳಲ್ಲಿ ಗುಂಡಿನ ದಾಳಿಯ ಘಟನೆಗಳು ನಡೆದಿವೆ. ಇದರಲ್ಲಿ ನೂರಾರು ಜನರು ಸಾವನ್ನಪ್ಪಿದ್ದಾರೆ. ಅಮೆರಿಕದಲ್ಲಿ ಗನ್ ಹೊಂದಲು ಯಾವುದೇ ಪರವಾನಗಿ ನಿಯಮವಿಲ್ಲ. ಇಲ್ಲಿ ಹೆಚ್ಚಿನ ಜನರು ರೈಫಲ್‌ಗಳನ್ನು ಹೊಂದಿದ್ದಾರೆ. ಹೀಗಾಗಿ ಅಮೆರಿಕದಲ್ಲಿ ಇಂತಹ ಘಟನೆಗಳು ನಡೆಯುತ್ತಲೇ ಇವೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ