Kornersite

Just In Sports

IPL 2023: ಅತೀ ಹೆಚ್ಚು ರನ್ ಗಳಿಸುವ ತಂಡದಲ್ಲಿ ಚೆನ್ನೈ “ಸೂಪರ್”!

ಚೆನ್ನೈನ ಸೂಪರ್ ತಂಡದ ಬ್ಯಾಟಿಂಗ್ ಭರ್ಜರಿ ಫಾರ್ಮ್ ನಲ್ಲದೆ. ಇಂದು ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ 200 ರನ್ ಗಳಿಸುವ ಮೂಲಕ ಐತಿಹಾಸಿಕ ದಾಖಲೆ ಬರೆದಿದೆ. ತನ್ನ ಸಾಂಪ್ರದಾಯಿಕ ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಾಖಲೆಯನ್ನು ಅದು ಮುರಿದಿದೆ.

ಪಂಜಾಬ್ ವಿರುದ್ಧ ಮೊದಲು ಬ್ಯಾಟ್ ಮಾಡಿದ ಚೆನ್ನೈ ಪರ ಡೆವೊನ್ ಕಾನ್ವೆ 52 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 16 ಫೋರ್ನೊಂದಿಗೆ ಅಜೇಯ 92 ರನ್ ಬಾರಿಸಿದರು. ಪರಿಣಾಮ ಸಿಎಸ್ಕೆ ತಂಡವು ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 200 ರನ್ ಕಲೆಹಾಕಿತು. ಇದರೊಂದಿಗೆ ಸಿಎಸ್ಕೆ ತಂಡವು ವಿಶೇಷ ದಾಖಲೆ ಬರೆದಿದೆ.

ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಬಾರಿ 200 ಅಥವಾ ಅದಕ್ಕಿಂತ ಹೆಚ್ಚಿನ ಸ್ಕೋರ್ ಗಳಿಸಿದ ವಿಶೇಷ ದಾಖಲೆ ಆರ್ ಸಿಬಿ ಹೆಸರಿನಲ್ಲಿತ್ತು. ಆ ದಾಖಲೆಯನ್ನು ಸಿಎಸ್ ಕೆ ಮುರಿದಿದೆ. ಆರ್ಸಿಬಿ ಕಳೆದ 15 ಐಪಿಎಲ್ ಸೀಸನ್ ಗಳಲ್ಲಿ ಒಟ್ಟು 22 ಬಾರಿ 200ಕ್ಕೂ ಅಧಿಕ ರನ್ ಗಳಿಸಿದೆ.
ಈ ಬಾರಿ ಚೆನ್ನೈ ಹಾಗೂ ಲಕ್ನೋ ವಿರುದ್ಧದ ಪಂದ್ಯಗಳಲ್ಲಿ 200 ಪ್ಲಸ್ ರನ್ ಕಲೆಹಾಕುವ ಮೂಲಕ ಈ ದಾಖಲೆಯನ್ನು 24 ಕ್ಕೆ ಏರಿಸಿದ್ದರು. ಸದ್ಯ ಸಿಎಸ್ ಕೆ ಒಂದೇ ಸೀಸನ್ನಲ್ಲಿ 4ನೇ ಬಾರಿ 200 ರನ್ ಕಲೆಹಾಕಿ ಆರ್ಸಿಬಿ ತಂಡದ ದಾಖಲೆಯನ್ನು ಹಿಂದಿಕ್ಕಿದೆ.

ಈ ಬಾರಿಯ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಲಕ್ನೋ, ಆರ್ ಸಿಬಿ, ಕೆಕೆಆರ್, ಪಂಜಾಬ್ ಕಿಂಗ್ಸ್ ವಿರುದ್ಧ 200 ಹಾಗೂ ಅದಕ್ಕಿಂತ ಹೆಚ್ಚಿನ ಸ್ಕೋರ್ ಕಲೆಹಾಕಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಒಟ್ಟು 27 ಬಾರಿ 200 ರನ್ ಕಲೆಹಾಕಿ ಆರ್ಸಿಬಿ ತಂಡದ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

ಐಪಿಎಲ್ನಲ್ಲಿ ಅತ್ಯಧಿಕ ಬಾರಿ 200 ರನ್ಗಳಿಸಿದ ತಂಡಗಳ ಪಟ್ಟಿಯಲ್ಲಿ ಚೆನ್ನೈ ತಂಡವು 27 200ಕ್ಕೂ ಅಧಿಕ ರನ್ ಗಳಿಸುವ ಮೂಲಕ ಮೊದಲ ಸ್ಥಾನದಲ್ಲಿದೆ. ಇನ್ನುಳಿದಂತೆ ಆರ್ ಸಿಬಿ 24, ಕೆಕೆಆರ್ 19, ಪಂಜಾಬ್ 19 ನಂತರದ ಸ್ಥಾನಗಳಲ್ಲಿವೆ.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Sports

ಮಾಜಿ ಕ್ರಿಕೆಟಿಗ ಸಲೀಂ ದುರಾನಿ ಇನ್ನಿಲ್ಲ!

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ಆಲ್ ರೌಂಡರ್ ಆಟಗಾರ ಸಲೀಂ ದುರಾನಿ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.1960ರ ದಶಕದಲ್ಲಿ ಭಾರತದ ಆಲ್ ರೌಂಡರ್