Bangalore : ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Elections 2023) ಯು ಮೇ. 10ರಂದು ನಡೆಯಲಿದೆ. ಹೀಗಾಗಿ ಎಲ್ಲ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ ನಡೆಯುತ್ತಿದೆ. ಇದರ ನಡುವೆ ಏಪ್ರಿಲ್ 29ರಿಂದ ಬ್ಯಾಲೆಟ್ ಪೇಪರ್ ವೋಟಿಂಗ್ ಶುರುವಾಗಿದೆ(Ballot Paper Voting). ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಗೌಪ್ಯ ಮತದಾನ ಎಲೆಕ್ಷನ್ ಕಮಿಷನ್ ಆರಂಭಿಸಿದೆ.
ಏಪ್ರಿಲ್ 29ರಿಂದ ಮೇ 6 ರವರೆಗೆ ಬ್ಯಾಲೇಟ್ ಮತದಾನಕ್ಕೆ ಅವಕಾಶ ನೀಡಲಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಈ ಮತದಾನ ಆರಂಭವಾಗಿದೆ. ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಹಿರಿಯ ನಾಗರಿಕರು, ಅಂಗವಿಕಲರು ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. ಅದರಲ್ಲಿಯೂ ಅಧಿಕಾರಿಗಳು ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ, ಮತಚಲಾಯಿಸುವಂತೆ ಮಾಡುತ್ತಿದ್ದಾರೆ. ಏ. 29ರಿಂದ ಈ ಪ್ರಕ್ರಿಯೆ ಆರಂಭವಾಗಿದ್ದು, ಮೇ 6ರ ವರೆಗೆ ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. 8 ದಿನಗಳಲ್ಲಿ ಅಧಿಕಾರಿಗಳು ಯಾವಾಗಲಾದರೊಮ್ಮೆ ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ನೋಂದಣಿ ಮಾಡಿಕೊಂಡಿರುವ ಹಿರಿಯ ನಾಗರಿಕರು ಹಾಗೂ ವಿಕಲ ಚೇತನ ಮತದಾರರ ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ, ಮತ ಚಲಾಯಿಸಿದ ನಂತರ ಅದನ್ನು ಮರಳಿ ಪಡೆದುಕೊಂಡು ಹೋಗುತ್ತಾರೆ.
ಚುನಾವಣಾ ಅಯೋಗದ ಸಿಬ್ಬಂದಿಗಳಿಂದ 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಮನೆ ಬಳಿ ತೆರಳಿ ಬ್ಯಾಲೆಟ್ ಪೇಪರ್ ನೀಡಿ ಗೌಪ್ಯವಾಗಿ ಮತ ಚಲಾವಣೆಗೆ ಅವಕಾಶ ನೀಡಲಾಗುತ್ತಿದ್ದು, ಗೌಪ್ಯ ಮತ ಚಲಾಯಿಸುವಾಗ ಚುನಾವಣೆ ಸಿಬ್ಬಂದಿ ಸೇರಿದಂತೆ ಸ್ಥಳೀಯ ಪೊಲೀಸರು ಹಾಜರಿರಲಿದ್ದಾರೆ. ಬೆಂಗಳೂರಿನಲ್ಲಿ 80 ವರ್ಷ ಮೇಲ್ಪಟ್ಟ ಸುಮಾರು 9152 ಹಿರಿಯ ಮತದಾರರನ್ನು ಗುರುತಿಸಲಾಗಿದೆ.