Kornersite

Bengaluru Just In Karnataka Politics State

Karnataka Assembly Election: ಮೈಸೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಮೋದಿ; ಹೂವಿನ ಸುರಿಮಳೆ!

Mysore : ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದೆ. ಘಟಾನುಘಟಿ ನಾಯಕರೆಲ್ಲ ರಾಜ್ಯಕ್ಕೆ ಆಗಮಿಸಿ, ಹಗಲಿರುಳು ಪ್ರಚಾರ ಕಾರ್ಯ ನಡೆಸಿದ್ದಾರೆ. ಅಷ್ಟೇ ಅಲ್ಲ, ಗೆಲ್ಲುವ ತಂತ್ರ- ಪ್ರತಿ ತಂತ್ರ ರೂಪಿಸುತ್ತಿದ್ದಾರೆ.

ಕರ್ನಾಟಕದಲ್ಲಿ (Karnataka) ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕು ಎಂದು ಪ್ರಧಾನಿ ಮೋದಿ (Narendra Modi) ಪಟ್ಟ ತೊಟ್ಟಂತಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ (Mysuru) ಸುಮಾರು 4 ಕಿ.ಮೀವರೆಗೆ ಮೋದಿ ರೋಡ್ ಶೋ (Road Show) ನಡೆಸಿದ್ದಾರೆ.

ಪ್ರಧಾನಿ ಮೋದಿ ಅವರು ಇಂದು ಕೋಲಾರ, ಚನ್ನಪಟ್ಟಣ, ಬೇಲೂರು, ಮೈಸೂರಿನಲ್ಲಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಮಾವೇಶದ ನಂತರ ಮೈಸೂರಿನ ಓವೆಲ್ ಮೈದಾನದಲ್ಲಿ ಇಳಿದ ಮೋದಿ ಬಳಿಕ ರೋಡ್ ಶೋ ನಡೆಸಿದ್ದಾರೆ.


ಬೆಂಗಳೂರಿನಲ್ಲಿ ಶನಿವಾರ ನಡೆಸಿದಂತೆ ಮೈಸೂರಿನಲ್ಲಿ ಇಂದು 4 ಕಿ.ಮೀ. ರೋಡ್ ಶೋ ನಡೆಸಿದ್ದಾರೆ. ರಸ್ತೆ ಇಕ್ಕೆಲೆಗಳಲ್ಲಿ ಕೇಸರಿ ಕಾರ್ಯಕರ್ತರು, ಅಭಿಮಾನಿಗಳು ಮೋದಿ ನೋಡಿ ಘೋಷಣೆ ಕೂಗಿದ್ದಾರೆ. ಅಲ್ಲದೇ, ದಾರಿಯುದ್ಧಕ್ಕೂ ಹೂಮಳೆ ಸುರಿಸಿದ್ದಾರೆ. ಹೂ ಹಾಕುವಾಗ ಅಭಿಮಾನಿಯೊಬ್ಬನ ಮೊಬೈಲ್ ಅಚಾನಕ್ ತೂರಿ ಬಂದ ಘಟನೆಯೂ ನಡೆಯಿತು. ಮೊಬೈಲ್ ಪ್ರಚಾರ ವಾಹನದ ಮೇಲೆ ಬಿದ್ದಿತ್ತು.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು