ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರಿನಲ್ಲಿ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಸಂಜೆ ಹಗುರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.