Ramangar : ಮೈಸೂರು – ಬೆಂಗಳೂರು ಎಕ್ಸ್ ಪ್ರೆಸ್ ವೇದಲ್ಲಿ (Mysuru Bengaluru Expressway) ಭೀಕರ ಅಪಘಾತ (Accident) ಸಂಭವಿಸಿದ್ದು, ಮೂವರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳಿಗೆ ಬ್ರೇಕ್ ಇಲ್ಲದಂತಾಗಿದೆ. ಇಲ್ಲಿ ಸದ್ಯ ಒಂದಲ್ಲ ಒಂದು ಅಪಘಾತಗಳು ಸಂಭವಿಸುತ್ತಲೇ ಇವೆ. ಸೋಮವಾರ ರಾಮನಗರ (Ramanagara) ತಾಲೂಕಿನ ಜಯಪುರ ಗೇಟ್ ಬಳಿ ರಸ್ತೆ ಅಪಘಾತ ಸಂಭವಿಸಿ ಮೂವರು ಯುವಕರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಿಂದ (Bengaluru) ಮೈಸೂರಿಗೆ (Mysuru) ಮೂವರು ಯುವಕರು ಒಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕೆಟ್ಟು ನಿಂತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಯುವಕರು ಕೆಳಗೆ ಬಿದ್ದಿದ್ದಾರೆ. ಅಲ್ಲದೇ, ಯುವಕರ ಹಿಂದೆಯಿಂದೆ ವೇಗವಾಗಿ ಬಂದ ಮತ್ತೊಂದು ಕಾರು ಕೂಡ ಡಿಕ್ಕ ಹೊಡೆದಿದೆ. ಈ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ರಾಮನಗರ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.